ಬೆಂಗಳೂರು, ಮೇ.16 : ದೇಶದಲ್ಲಿ ಏಕಕಾಲಕ್ಕೆ 71,000 ಯುವಕ/ಯುವತಿಯರಿಗೆ ಉದ್ಯೋಗ ಕಲ್ಪಿಸುವ ಬೃಹತ್ ಯೋಜನೆ ರೋಜ್‌ಗಾರ್ ಮೇಳದ ಐದನೇ ಆವೃತ್ತಿಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ಉದ್ಘಾಟಿಸಿದರು.
ಬೆಂಗಳೂರಿನಲ್ಲಿಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೋಜ್ ಗಾರ್ ಮೇಳದ ಐದನೇ ಆವೃತ್ತಿ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, “ಈವರೆಗೆ ಒಟ್ಟು 3.6 ಲಕ್ಷ ಜನರಿಗೆ ಉದ್ಯೋಗ ನೇಮಕಾತಿ ಮಾಡುವ ಮೂಲಕ, ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಮ್ಮ ಕೇಂದ್ರ ಸರಕಾರ ಮಹತ್ತರವಾದ ಹೆಜ್ಜೆ ಇಟ್ಟಿದೆ. ಸರಕಾರಿ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿ, ಇಲಾಖೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ಈ ಯೋಜನೆ ಸಹಕಾರಿಯಾಗಿದೆ ಮತ್ತು ಯುವಪೀಳಿಗೆಗೆ ಉದ್ಯೋಗ ಅವಕಾಶ ಕೂಡ ನೀಡಿದಂತಾಗಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಕೇಂದ್ರ ಸರಕಾರ ಸದಾ ಬದ್ಧವಾಗಿದ್ದು, ಯುವಜನತೆಯ ಕೌಶಲ್ಯ ಅಭಿವೃದ್ಧಿಗಾಗಿ ಹತ್ತಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗಿದೆ. ರಾಜ್ಯದ ಜನರ ಬೇಡಿಕೆಗೆ ಅನುಗುಣವಾಗಿ ನಮ್ಮ ಕೇಂದ್ರ ಸರಕಾರ ಮುಂದೆಯೂ ಕಾರ್ಯ ನಿರ್ವಹಿಸಲಿದೆ” ಎಂದರು. ಕಾರ್ಯಕ್ರಮದಲ್ಲಿ ಸಂಸದ ಪಿಸಿ ಮೋಹನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ರಾಜಕೀಯ ಮರೆತು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಹೆಚ್.ಪಿ. ಸ್ವರೂಪ್
‘ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ’
‘ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’




