ದೇವೇಗೌಡರ ಅನುಭವಧಾರೆ ನಮಗೆಲ್ಲ ಅಮೃತಧಾರೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬವಾಗಿದ್ದು, ಅವರ ಪುತ್ರ, ಮಾಜಿ ಸಿಎಂ ಕುಮಾರಸ್ವಾಮಿ, ತಂದೆಯವರಿಗೆ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಭಾರತದ 11ನೇ ಪ್ರಧಾನಮಂತ್ರಿಗಳು, ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. ನನ್ನ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ಅವರು, ಜನತಾದಳದ ಪಾಲಿನ ಮಹಾನ್ ಚೈತನ್ಯ. ದೇಶ ಮತ್ತು ಕನ್ನಡನಾಡಿಗೆ ಅವರ ಕೊಡುಗೆ ಅವಿಸ್ಮರಣೀಯ. ಅವರ ಅನುಭವಧಾರೆ ನಮಗೆಲ್ಲ ಅಮೃತಧಾರೆ. ಆ ಭಗವಂತ ಶ್ರೀಯುತರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಅವರು ನಮ್ಮೆಲ್ಲರನ್ನು ಇನ್ನೂ ದೀರ್ಘಕಾಲ ಮುನ್ನಡೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಹಾಸನದಲ್ಲಿ ಶಾಸಕ ಸ್ವರೂಪ್ ಗೌಡ ದೇವೇಗೌಡರ ಹೆಸರಿನಲ್ಲಿ ದೇವಸ್ಥಾನದಲ್ಲಿ ಪೂಜೆ ಮಾಡಿಸಿದ್ದು, ಅವರ ಅಭಿಮಾನಿಗಳು ಫೋಟೋಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಅಲ್ಲದೇ, ಹಲವು ಗಣ್ಯರು ದೇವೇಗೌಡರಿಗೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ದೊಡ್ಡಗೌಡರ ಅಭಿಮಾನಿಗಳು, ಅವರ ಹುಟ್ಟುಹಬ್ಬದ ಪ್ರಯುಕ್ತ, ರಕ್ತದಾನ, ಅನ್ನದಾನ ಸೇರಿ ಹಲವು ಉತ್ತಮ ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ತಾವರ್ ಚಂದ್ ಗೆಹ್‌ಲೋಟ್ ಅವರು ಕೂಡ ಟ್ವೀಟ್ ಮಾಡುವ ಮೂಲಕ ದೇವೇಗೌಡರಿಗೆ ವಿಶ್ ಮಾಡಿದ್ದು, ಇವರೆಲ್ಲರಿಗೂ ದೇವೇಗೌಡರು ಟ್ವೀಟರ್‌ನಲ್ಲಿ ಸ್ಪೆಶಲ್ ಥ್ಯಾಂಕ್ಸ್ ಹೇಳಿದ್ದಾರೆ.

‘ಮೊದಲ ಆದ್ಯತೆ ದೇವೇಗೌಡರಿಗೆ. ಅವರ ಹುಟ್ಟುಹಬ್ಬಕ್ಕೆ ಸ್ವರೂಪ್ ಗೆಲುವೇ ಉಡುಗೊರೆ ‘

ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸ್ವರೂಪ್..

‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ’

About The Author