ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಕೇಂದ್ರ ಸಚಿವರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರೂ ಕೂಡ, ಬಿಜೆಪಿ ಗೆಲುವು ಸಾಧಿಸಲಿಲ್ಲ. ಇದರಲ್ಲಿ ಬಿಜೆಪಿ ಕಾರ್ಯಕರ್ತರ ಶ್ರಮವೂ ಸಾಕಷ್ಟಿತ್ತು. ಆದರೂ ಬಿಜೆಪಿ ಗೆಲುವು ಸಾಧಿಸುವಲ್ಲಿ ವಿಫಲವಾಯಿತು. ಈ ಕಾರಣಕ್ಕೆ ಪ್ರತಾಪ್ ಸಿಂಹ ಟ್ವೀಟ್ ಮಾಡಿ, ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗು ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ. ಹಾಗೂ… ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಬರೆದುಕೊಂಡಿದ್ದಾರೆ.
ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗು ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ. 1/2
— Pratap Simha (@mepratap) May 18, 2023
ಹಾಗೂ…
ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ. 2/2
— Pratap Simha (@mepratap) May 18, 2023
ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ, ಕಾಯಿ ಒಡೆದು ಹರಕೆ ಸಲ್ಲಿಕೆ: ಕೊಟ್ಟೂರು ಮಂಜುನಾಥ್ಗೆ ಸಚಿವ ಸ್ಥಾನ ನೀಡಲು ಆಗ್ರಹ
‘ಮೊದಲ ಆದ್ಯತೆ ದೇವೇಗೌಡರಿಗೆ. ಅವರ ಹುಟ್ಟುಹಬ್ಬಕ್ಕೆ ಸ್ವರೂಪ್ ಗೆಲುವೇ ಉಡುಗೊರೆ ‘