Wednesday, February 5, 2025

Latest Posts

ಪತ್ರಕರ್ತ ಶ್ರೀ ಸುದರ್ಶನ ಚನ್ನಂಗಿಹಳ್ಳಿ ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಆಯ್ಕೆ

- Advertisement -

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ೨೦೨೩ನೇ ಸಾಲಿನ ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಹಿರಿಯ ಪತ್ರಕರ್ತರಾದ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ೧೦,೦೦೦(ಹತ್ತು ಸಾವಿರ)ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸ್ವಾತಂತ್ರ್ಯಹೋರಾಟಗಾರಾದ ಶ್ರೀ ನಾಗಡಿಕೆರೆ ಕಿಟ್ಟಪ್ಪಗೌಡ ಅವರು ಈ ದತ್ತಿ ನಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಮಟ್ಟದ ಈ ಪುರಸ್ಕಾರವನ್ನು ಕನ್ನಡ ಪತ್ರಿಕೋದ್ಯಮದಲ್ಲಿ ನಿರ್ಭಿತವಾಗಿ ಯಾವುದೇ ಆಮಿಷಗಳಿಗೂ ಒಳಗಾಗದೆ ಪ್ರಾಮಾಣಿಕವಾಗಿ ವಿಮರ್ಶಿಸಿ, ಸರ್ಕಾರದ, ರಾಜಕಾರಣಿಗಳ, ಸರಕಾರಿ ನೌಕರರ. ಸಮಾಜದ ನ್ಯೂನತೆಗಳನ್ನು ಎತ್ತಿ ಹಿಡಿದು ತೋರಿಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡಬೇಕು ಎನ್ನುವುದು ದತ್ತಿ ದಾನಿಗಳ ಆಶಯವಾಗಿದೆ. ಅದರಂತೆ ಕಳೆದ ೧೩ ವರ್ಷಗಳಿಂದ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಈ ಪ್ರಶಸ್ತಿಯನ್ನು ನೀಡುತ್ತ ಬಂದಿರುತ್ತದೆ.

ಈವರೆಗೆ ಕನ್ನಡ ಪತ್ರಿಕೋದ್ಯಮದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ೧೩ ಜನರಿಗೆ ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿʼಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರದಾನ ಮಾಡಲಾಗಿದ್ದು ಈ ಬಾರಿ ೨೦೨೩ನೇ ಸಾಲಿನ ಪ್ರಶಸ್ತಿಯು ೧೪ನೇ ಪ್ರಶಸ್ತಿಯಾಗಿದ್ದು ಈ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರನ್ನು ಆಯ್ಕೆ ಸಮಿತಿ ಆಯ್ಕೆಮಾಡಿರುತ್ತದೆ. ಪ್ರಸ್ತುತ ಕನ್ನಡದ ಪ್ರಮುಖ ದಿನಪತ್ರಿಕೆಯಾಗಿರುವ ʻವಿಜಯ ಕರ್ನಾಟಕʼ ದಿನಪತ್ರಿಕೆಯಲ್ಲಿ ಇವರು ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಆಯ್ಕೆಯಾಗಿರುವ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ ಎಂದು ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ, ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ಕೆಲ ಮಾಧ್ಯಮಗಳಿಗೆ ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು..?

ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ : ಬಸವರಾಜ ಬೊಮ್ಮಾಯಿ

- Advertisement -

Latest Posts

Don't Miss