Bengaluru News: ಬೆಂಗಳೂರು: ಬೆಂಗಳೂರು ಸೇರಿ ಹಲವ ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಜೂನ್ 6ರವರೆಗೂ ಹೀಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಮೇ ತಿಂಗಳಲ್ಲಿ ಸುರಿದ ಮಳೆ ದಾಖಲೆ ಸೃಷ್ಟಿಸಿದ್ದು, 66 ವರ್ಷಗಳ ದಾಖಲೆ ಮುರಿದಿದೆ.
ಇನ್ನು ದಕ್ಷಿಣ ಕನ್ನಡ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭಾಗದಲ್ಲೂ ಜೂನ್ 6ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ವರ್ಷ ನೈಋತ್ಯ ಮುಂಗಾರು ಬರುವುದು ವಿಳಂಬವಾಗಿದ್ದು, ಕೇರಳದಲ್ಲಿ ಜೂನ್ 4ರಿಂದ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಕರ್ನಾಟಕದಲ್ಲಿ ಮಳೆ ಶುರುವಾಗುವುದು ಕೂಡ ಲೇಟ್ ಆಗುವ ಸಾಧ್ಯತೆ ಇದೆ.
ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ
ಭಾರೀ ಗಾಳಿ ಮಳೆಗೆ ಕುಸಿದ ಮನೆಗಳು: ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ಪರಿಶೀಲನೆ.




