‘ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್‌ ಸರ್ಕಾರ ಬದ್ಧ’

Political News: ಬೆಂಗಳೂರು: ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲ ಶಾಸಕರು, ಸಂಸದರು, ಎಂಎಲ್‌ಸಿ ಪರಿಷತ್ ಸದಸ್ಯರೊಂದಿಗೆ ಇಂದು ಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿ, ಅವರ ಸಲಹೆ, ಅಭಿಪ್ರಾಯವನ್ನು ಸಂಗ್ರಹಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ..

ಬೆಂಗಳೂರಿನ ನಿವಾಸಿಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ, ತ್ಯಾಜ್ಯದ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಂಡರ್‌ ಪಾಸ್‌ ರಸ್ತೆಗಳಲ್ಲಿ ಕ್ಯಾಮೆರಾ ಅಳವಡಿಸುವ ಮೂಲಕ ಮಳೆ ಸುರಿಯವ ವೇಳೆ ಸಂಭವಿಸುವ ಅನಾಹುತಗಳನ್ನು ತಡೆಯಲು ಚಿಂತಿಸಲಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರಿನ ಪ್ರತಿಯೊಂದು ವಾರ್ಡ್‌ಗೂ ಪ್ರತ್ಯೇಕ ಫೈಲ್‌ ಇರಬೇಕು. ಸರ್ಕಾರದ ಯಾವುದೇ ಕಾಮಗಾರಿ ನಡೆದರೂ ಕೆಲಸ ಆರಂಭಿಸುವ ಮುನ್ನ, ಕಾಮಗಾರಿ ಪೂರ್ಣಗೊಂಡಿರುವ ಫೋಟೋ ಇರಬೇಕು. ಪ್ರತಿದಿನ ನಡೆಯುವ ಕಾಮಗಾರಿಗಳ ಫೋಟೋ ಇರಬೇಕು. ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕಾಂಗ್ರೆಸ್‌ ಸರ್ಕಾರ ಬದ್ಧವಿದೆ ಎಂದು ತಿಳಿಸಿದೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

About The Author