Sunday, May 11, 2025

Latest Posts

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ

- Advertisement -

Political News: ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

JDS ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಮಂತ್ರಿಗಳು.

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಆಗುವ ಸಾಧ್ಯತೆ ಇದೆಯೇ? ಹಾಗೂ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರುದ್ಧ ಸಮಾನಮನಸ್ಕ ಪಕ್ಷಗಳು ಒಂದಾದರೆ, ಆ ಒಕ್ಕೂಟದ ನೇತೃತ್ವ ವಹಿಸುವಿರಾ ಎಂದು ಕೇಳಲಾದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.

ಅಲ್ಲದೆ, ಬಿಜೆಪಿ ವಿರುದ್ಧ ಒಕ್ಕೂಟ ರಚನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಯತ್ನ ನಡೆಸುತ್ತಿರುವ ಬಗ್ಗೆಯೂ ಮಾಜಿ ಪ್ರಧಾನಿಗಳ ಗಮನ ಸೆಳೆಯಲಾಯಿತು.

ಈ ದೇಶದಲ್ಲಿ ಬಿಜೆಪಿ ಜತೆ ಸೇರಿ ರಾಜಕೀಯ ಮಾಡದೆ ಇರುವ ಯವುದರೂ ಪಕ್ಷವನ್ನು ತೋರಿಸಿ ಎಂದು ಮರು ಪ್ರಶ್ನೆ ಹಾಕಿದ ಮಾಜಿ ಪ್ರಧಾನಿಗಳು, ಮೊದಲು ನನ್ನ ಪ್ರಶ್ನೆಗೆ ಉತ್ತರ ನೀಡಿ. ಆಮೇಲೆ ನಿಮ್ಮ ಪ್ರಶ್ನೆಗೆ ಉತ್ತರ ಕೊಡುತ್ತೇನೆ ಎಂದರು.

ಅನೇಕ ಪಕ್ಷಗಳು ವಿವಿಧ ರಾಜ್ಯಗಳಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಬಿಜೆಪಿ ಪಕ್ಷದ ಜತೆಗೆ ಕೈಜೋಡಿಸಿವೆ. ಕಾಂಗ್ರೆಸ್ ಪಕ್ಷದ ಅನೇಕರು ನಾಯಕರು ಬಿಜೆಪಿ ಜತೆ ಶಾಮೀಲಾಗಿದ್ದಾರೆ. ಕರ್ನಾಟಕದಲ್ಲಿಯೂ ಅದನ್ನು ಕಾಣಬಹುದು. ಇದರಲ್ಲಿ ಮುಚ್ಚುಮರೆ ಏನಿದೆ? ಎಂದು ಅವರು ಖಾರವಾಗಿ ಹೇಳಿದರು.

ಪಕ್ಷವನ್ನು ಸಂಘಟಿಸುತ್ತೇವೆ:

ನಿಜ, ಈ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಅದರಿಂದ ಕುಗ್ಗಬೇಕಿಲ್ಲ. ಅನೇಕ ಚುನಾವಣೆಗಳಲ್ಲಿ ನಾನು ಸೇರಿದಂತೆ ನಾವೆಲ್ಲರೂ ಗೆದಿದ್ದೇವೆ, ಸೋತಿದ್ದೇವೆ. ಆಮೇಲೆ ಪಿನಿಕ್ಸಿನಂತೆ ಮೇಲೆದ್ದು ಬಂದಿದ್ದೇವೆ. ಈಗಲೂ ಅಷ್ಟೇ, ಸೋತಿದ್ದೇವೆ ಎಂದು ಮನೆಯಲ್ಲಿ ಕೂರಲಾರೆ. ಪಕ್ಷಕ್ಕಾಗಿ ಎಷ್ಟು ಕೆಲಸ ಮಾಡಲಿಕ್ಕೂ ನಾನು ತಯಾರಿದ್ದೇನೆ ಎಂದು ಮಾಜಿ ಪ್ರಧಾನಿ H.D.Devegowda ಹೇಳಿದರು.

ಮುಂದೆ ನಮ್ಮ ಅನೇಕ ಚುನಾವಣೆಗಳಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಸೇರಿ ಹಲವಾರು ಚುನಾವಣೆಗಳಿವೆ. ಈ ಚುನಾವಣೆಗಳಿಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕು. ಆ ಬಗ್ಗೆ ಪಕ್ಷದಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ. ಸಂಘಟನೆ ಕಡೆ ಒತ್ತು ನೀಡಲಾಗುತ್ತಿದೆ. ಇನ್ನು, ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ, ಯಾವ ಯಾವ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಪ್ರಧಾನಿಗಳು ತಿಳಿಸಿದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆಯೋ ಇಲ್ಲವೋ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಪಕ್ಷದ ಹಿರಿಯ ನಾಯಕ, ಶಾಸಕ ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಬಿಎಂ ಫಾರೂಖ್, ಟಿ.ಎ.ಶರವಣ, ಇಂಚರ ನಾರಾಯಣಸ್ವಾಮಿ, ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಶಾಸಕರಾದ ಮೇಲೂರು ರವಿ, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ ಮೂರ್ತಿ, ಹಿರಿಯ ಮುಖಂಡರಾದ ಜವರಾಯ ಗೌಡ, ಸಿಎಂಆರ್ ಶ್ರೀನಾಥ್, ಮುನೇಗೌಡ, ಬಂಗಾರಪೇಟೆ ಮಲ್ಲೇಶ್ ಮುಂತಾದವರು ಹಾಜರಿದ್ದರು.

’14ನೇ ಬಜೆಟ್ ಮಂಡಿಸಲು ಸಿದ್ಧವಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ?’

‘ಈ ಹೋರಾಟದ ಮುಂದೆ ನನ್ನ ಕೆಲಸ ಚಿಕ್ಕದು, ಅವಶ್ಯಕತೆ ಇದ್ದರೆ, ಕೆಲಸವನ್ನೂ ಬಿಡುತ್ತೇನೆ’

‘ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ’

- Advertisement -

Latest Posts

Don't Miss