Tuesday, April 22, 2025

Latest Posts

ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್‌ರನ್ನ ಭೇಟಿಯಾದ ನಿಖಿಲ್ ಕುಮಾರ್.

- Advertisement -

Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್ ಅವರನ್ನು ಲಖನೌದ ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಲಾಯಿತು. ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಶ್ರೀ ಅಖಿಲೇಶ್ ಅವರು ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು.

ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಶ್ರೀ ಅಖಿಲೇಶ್ ಅವರು ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ಎಂದು ನಿಖಿಲ್ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss