Thursday, October 30, 2025

Latest Posts

‘ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ’

- Advertisement -

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿದರು. ಬಳಿಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ ಎಂದು ಹೇಳಿದ್ದಾರೆ.

ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತಾ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡ ದಿಂದ ಅಕ್ಕಿ ತರ್ತೀವಿ ಅಂತಿದ್ದಾರೆ.. ನಮಗೆ ಬಡಜನರಿಗೆ ಒಳ್ಳೆದು ಆದ್ರೆ ಸಾಕು ಎಂದು ಬೊಮ್ಮಾಯಿ ಹೇಳಿದ್ದಾರೆ.

ಎಲ್ಲಿಂದ ತಗೊಬೇಕು, ಹೇಗೆ ತಗೊಬೇಕು ಅನ್ನೋ ಪ್ರಶ್ನೆ.. ರಾಜ್ಯದ ರೈತರು ಅಕ್ಕಿ ಕೊಡೊಕೆ ಮುಂದೆ ಬಂದ್ರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಿಸಿ ಅನ್ನೋದು ಸರಿ ಅಲ್ಲ. ಅಕಸ್ಮಾತ್ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದ್ರೆ ನಾವು ಪ್ರತಿಭಟನೆ ಮಾಡ್ತೀವಿ. ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ, 500 ಹಳ್ಳಿಗೆ ಕುಡಿಯೋ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ.. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.

ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತಗೆದುಕೊಂಡು ಏನ‌ು ಮಾಡಬೇಕು..? ಸೆಷನ್ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗತ್ತೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಕೆರೆಯಲ್ಲಿ ಮುಳುಗಿದ ವ್ಯಕ್ತಿ ಕುಟುಂಬಕ್ಕೆ ಸಾಂತ್ವನ ,ಪರಿಹಾರ ಭರವಸೆ ನೀಡಿದ ಶಾಸಕ ಬಿ.ವೈ.ವಿಜಯೇಂದ್ರ

ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..

ವ್ಹೀಲ್ ಚೇರ್ ಇಲ್ಲದ್ದಕ್ಕೆ, ಸ್ಕೂಟಿಯಲ್ಲೇ ಆಸ್ಪತ್ರೆಯ ಲಿಫ್ಟ್ ಏರಿ ಹೋದ ವ್ಯಕ್ತಿ : ವೀಡಿಯೋ ವೈರಲ್

- Advertisement -

Latest Posts

Don't Miss