Political News: ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳನ್ನು ಸರಿಯಾಗಿ ಯೋಜನೆಗೆ ತರಲಾಗದೇ, ಅವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಕೊಟ್ಟ ಮಾತನ್ನು ಉಳಿಸಿಕೊಳ್ಳಲೇಬೇಕು. ಬೆಲೆಗಳನ್ನು ಕಡಿಮೆ ಮಾಡಬೇಕು. ಇಲ್ಲದಿದ್ದಲ್ಲಿ ನೀವು ರಾಜ್ಯದ ಮಹಿಳೆಯರ ಆಕ್ರೋಶಕ್ಕೆ ಈಡಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕುಮಾರಸ್ವಾಮಿ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.
5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ.
ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್’ಗೆ ಕೊಳ್ಳಿ ಇಡುವುದಾ?
ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು 1.ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು! 2.ಗೃಹಜ್ಯೋತಿ ಈಗ ಸುಡುಜ್ಯೋತಿ!! 3.ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ!!! 4.ಗೃಹಲಕ್ಷ್ಮಿಗೆ ಗ್ರಹಣ!!!! 5.ನಿದಿರೆಗೆ ಜಾರಿದೆ ಯುವನಿಧಿ!!!!
ಈ ರೀತಿಯಾಗಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದಾರೆ.
@INCKarnataka ಸರಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ. ಎಚ್ಚರ..
8/8— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 26, 2023
ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್'ಗೆ ಕೊಳ್ಳಿ ಇಡುವುದಾ?6/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 26, 2023
ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು
1.ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು!
2.ಗೃಹಜ್ಯೋತಿ ಈಗ ಸುಡುಜ್ಯೋತಿ!!
3.ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ!!!
4.ಗೃಹಲಕ್ಷ್ಮಿಗೆ ಗ್ರಹಣ!!!!
5.ನಿದಿರೆಗೆ ಜಾರಿದೆ ಯುವನಿಧಿ!!!!7/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 26, 2023
‘ಬಿಜೆಪಿಗೆ ಹೋದವರನ್ನ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮಾತೇ ಇಲ್ಲ’