Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಐತಿಹಾಸಿಕ ತಾಣವಾಗಿರುವ ಉಣಕಲ್ ಕೆರೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸಾವುನೋವುಗಳು ಸಂಭವಿಸುತ್ತಲೇ ಇದೆ. ಇದು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಮಾತ್ರ ತಲೆ ನೋವಾಗಿದೆ.
ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಹುಬ್ಬಳ್ಳಿಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಮರು ಜೀವ ನೀಡಿದ್ದಾರೆ. ಹೌದು.. ಧಾರವಾಡದ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ ಬಾಬು ಎಂಬಾತನೇ ಕೆರೆಯಲ್ಲಿ ಬಿದ್ದಿದ್ದ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.
ಅಗ್ನಿಶಾಮಕ ದಳದ ಡಿಎಫ್ಒ ವಿನಾಯಕ ಕಲ್ಗುಟಕರ, ಠಾಣಾಧಿಕಾರಿ ಹಾತರಕಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ವ್ಯಕ್ತಿಯ ಜೀವವನ್ನು ಕಾಪಾಡಿ ಮರುಜನ್ಮ ನೀಡಿದ್ದಾರೆ.
ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೀಬೇಡಿ: ಕಾಂಗ್ರೆಸ್ ಪಂಚೆ ಟ್ವೀಟ್ಗೆ ಸಚಿವ ಪ್ರಲ್ಹಾದ ಜೋಶಿ ತಿರುಗೇಟು
ಕೇಳಿದಷ್ಟು ಹಣ ನೀಡದ್ದಕ್ಕೆ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರು ಅರೆಸ್ಟ್




