Tuesday, October 14, 2025

Latest Posts

ಕರಾವಳಿ ಮಹಾಮಳೆಗೆ ಮತ್ತೊಂದು ಬಲಿ

- Advertisement -

karavali News: ಕರಾವಳಿ ಭೀಕರ ಮಳೆಗೆ ತತ್ತರಿಸಿ ಹೋಗಿದೆ. ನಿರಂತರ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದೆ. ಮನೆಗೆ ಗುಡ್ಡ ಕುಸಿದು ಮಹಿಳೆಯೋರ್ವರು ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ವಿಪರೀತ ಮಳೆಯಿಂದಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಇಬ್ಬರು ಮಹಿಳೆಯರು ಮನೆಯೊಳಗೆ ಸಿಲುಕಿಕೊಂಡಿದ್ದರು. ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಕಾರ್ಯಾಚರಣೆ ನಡೆಸಿ ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ. ಝರೀನಾ [46] ಸಾವನ್ನಪ್ಪಿರುವ ಮಹಿಳೆ. ಝರೀನಾ ಪುತ್ರಿ  ಶಫಾ [20] ರನ್ನು ರಕ್ಷಿಸಲಾಯಿತು. ಎಸ್ ಬಿ ಕೂಡಲಗಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಳೆಗೆ ಇದು 5ನೇ ಬಲಿ.

ಶಕ್ತಿ ಯೋಜನೆಯಿಂದ ಆಟೋ ಚಾಲಕರು ಕಂಗಾಲು

ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ..!

ಕರಾವಳಿ ಮಳೆ ಹಾನಿಗೆ ಕೂಡಲೇ ಪರಿಹಾರ ಸೂಚಿಸುವಂತೆ ಸಿಎಂ ಸೂಚನೆ..!

- Advertisement -

Latest Posts

Don't Miss