KolarNews: ಕೋಲಾರ: ರಾಜ್ಯ ಸರಕಾರದ ಬಹು ನಿರೀಕ್ಷಿತ ಮೊದಲ ಬಜೆಟ್ ಸರಕಾರದ ಆರನೇ ಗ್ಯಾರಂಟಿಯಾಗಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಿದ್ದಾರೆ ಹೊರತು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂಶಕ್ತಿ ಚಲಪತಿ ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯದಲ್ಲಿ ಸುಮಾರು 14 ಬಜೆಟ್ ಗಳನ್ನು ಮಂಡನೆ ಮಾಡಿರುವ ಸಿದ್ದರಾಮಯ್ಯ ಈ ಬಾರಿಯೂ ಕೂಡ ಸಂಪೂರ್ಣ ನಿರಾಸೆಯ ಬಜೆಟ್ ಆಗಿದೆ ಚುನಾವಣೆಯ ಮುಂಚೆ ಘೋಷಣೆ ಮಾಡಿದ್ದ ಗ್ಯಾರಂಟಿಗಳ ಜಾರಿಗಾಗಿ ಪರದಾಡುವ ಸಂದರ್ಭದಲ್ಲಿ ಮತ್ತೊಂದು ಗ್ಯಾರಂಟಿಯ ಸರಕಾರವಾಗಿದೆ ಇದರಿಂದ ಮುಸ್ಲಿಂ ಸಮುದಾಯದಕ್ಕೆ ಬಿಟ್ಟರೆ ಬೇರೆ ಯಾವುದೇ ಸಮುದಾಯಕ್ಕೂ ಅನುಕೂಲವಾಗಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಸುಳ್ಳು ಭರವಸೆಗಳನ್ನು ಜನತೆ ಮುಂದಿಟ್ಟು ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರಕಾರವು ಕೇವಲ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಸಮುದಾಯಗಳನ್ನು ಮೆಚ್ಚಿಸಿಕೊಳ್ಳುವ ಮೂಲಕ ಸಿದ್ದರಾಮಯ್ಯ ರಾಜ್ಯದಲ್ಲಿ ಬಜೆಟ್ ಮಂಡನೆ ಮಾಡಿದ್ದಾರೆ ಕೋಲಾರ ಜಿಲ್ಲೆ ಬೆಂಗಳೂರಿಗೆ ಹತ್ತಿರದಲ್ಲಿ ಇದ್ದರೂ ಜಿಲ್ಲೆಗೆ ಕಾಂಗ್ರೆಸ್ ಸರಕಾರದ ಬಜೆಟ್ ನಲ್ಲಿ ಶೂನ್ಯವಾಗಿದೆ ಮುಂದಿನ ದಿನಗಳಲ್ಲಿ ಬಜೆಟ್ ನಿರ್ಲಕ್ಷ್ಯ ಮಾಡಿದಕ್ಕೆ ತಕ್ಕ ಪಾಠವನ್ನು ಜನತೆ ಕಲಿಸಲಿದ್ದಾರೆ ಎಂದರು.
ಶಾಸಕನಲ್ಲ.. ಆದರೂ ವಿಧಾನ ಸೌಧ ಪ್ರವೇಶಿಸಿದ್ದ..?! ಭದ್ರತಾ ಲೋಪವೋ..?! ವಿಪಕ್ಷದ ಕುತಂತ್ರವೋ..?!