Hubbli News: ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷ ಪೂರೈಕೆ ಹಿನ್ನೆಲೆ ನಗರದ ಖಾಸಗಿ ಹೊಟೇಲ್ ನಲ್ಲಿ ಪ್ರಬುದ್ಧರ ಸಭೆ ಆಯೋಜಿಸಲಾಗಿತ್ತು. ಪ್ರಬುದ್ಧರ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 9 ವರ್ಷದ ಆಡಳಿತದ ಸಾಧನೆ ಕುರಿತು ಚರ್ಚೆ ಮಾಡಲಾಯಿತು. ಕೇಂದ್ರ ಸರ್ಕಾರ ಹಾಗೂ ಮೋದಿಯವರ ಸಾಧನೆ ಕುರಿತು ಸಾರ್ವಜನಿಕರೊಂದಿಗೆ ಚರ್ಚೆ ಮಾಡಲಾಯಿತು. ಆರ್ಥಿಕ ತಜ್ಞ ವಿಶ್ವನಾಥ ಭಟ್ ಅವರಿಂದ ಕೇಂದ್ರ ಸರ್ಕಾರದ ಸಾಧನೆ ಕುರಿತು ಉಪನ್ಯಾಸ ನೀಡಿದರು. ಸಭೆಯಲ್ಲಿ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಧಾರವಾಡ ಲೋಕಸಭಾ ಕ್ಷೇತ್ರ ವಿವಿಧ ಭಾಗದ ಸಾರ್ವಜನಿಕರು ಭಾಗಿಯಾಗಿದ್ದರು.
Pradeep Eshwar : ಸುಧಾಕರ್ ಗೆ ಪ್ರತಿ ಸವಾಲೆಸೆದ ಶಾಸಕ ಪ್ರದೀಪ್ ಈಶ್ವರ್…!
Siddaramaiah : ಪ್ರಬುದ್ಧ ಕರ್ನಾಟಕ ಜನಮನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ