ಮಂಡ್ಯ ವಿವಿ ಉಳಿವಿಗಾಗಿ ಸುಮಲತಾ ಅಂಬರೀಶ್ ಪತ್ರ..!

ಕರ್ನಾಟಕ ಟಿವಿ : ಮಂಡ್ಯ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ನಡುವೆ 2019-20ನೇ ಸಾಲಿನ ಸಿ-3 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಪತ್ರ ಮುಖೇನ ಹಾಗೂ ಕರೆ ಮಾಡಿ ಮನವಿ ಮಾಡಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.. ಸಂಸದೆ ಮನವಿಗೆ ಸ್ಪಂದಿಸಿರುವ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ  ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ..

About The Author