- Advertisement -
State News : ಇಂದು ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ ನಳಿನ್ಕುಮಾರ್ ಕಟೀಲ್ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ಮಾಹಿತಿ ಪಡೆಯಿತು. ಬಳಿಕ ಚಿಕ್ಕೋಡಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಹಿಂದೆ ಯಾವುದಾದರೂ ಶಕ್ತಿಗಳಿವೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದರು.
ಇದರ ಹಿಂದಿರುವ ಯಾವುದೇ ಶಕ್ತಿಯ ಬಂಧನ ಮತ್ತು ಕಠಿಣ ಶಿಕ್ಷೆ ಆಗಬೇಕೆಂದು ಬಿಜೆಪಿ ಒತ್ತಾಯಿಸುವುದಾಗಿ ಹೇಳಿದರು. ಒಬ್ಬ ಸಂತರ ಹತ್ಯೆ ಆದಾಗ ಎಲ್ಲ ಪಕ್ಷಗಳಿಗೆ ಜವಾಬ್ದಾರಿ ಇದೆ. ಸಂತರು, ಮಠಾಧೀಶರು ಈ ಭೀಕರ ಹತ್ಯೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ. ಸಮಾಜದಲ್ಲಿ ಎಲ್ಲರಿಗೂ ವಿಶ್ವಾಸ ಒದಗಿಸಲು ಸ್ಪಷ್ಟ ಪಾರದರ್ಶಕ ತನಿಖೆ ಮಾಡಬೇಕು ಎಂದು ಹೇಳಿದರು.
Fake Record : ನಕಲಿ ದಾಖಲೆ ಸಿದ್ದಪಡಿಸುತ್ತಿದ್ದ ಜಾಲ ಬೇಧಿಸಿದ ಪೊಲೀಸರು
- Advertisement -