- Advertisement -
Banglore News: ರಾಹುಲ್ ಗಾಂಧಿ ಅರ್ಜಿ ವಜಾ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸೇರಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.
ರಾಹುಲ್ ಗಾಂಧಿಯ ಕುರಿತು ಬೃಹತ್ ಷಡ್ಯಂತ್ರ ನಡೆಸಲಾಗುತ್ತಿದೆ. ಇದೊಂದು ಬಿಜೆಪಿ ಹುನ್ನಾರ ಎಂಬುವುದಾಗಿ ಆರೋಪಿಸಿ ಕಾಂಗ್ರೆಸ್ ಮೌನ ಪ್ರತಿಭಟನೆಗೆ ಮುಂದಾಗಿದೆ.
ಇನ್ನು ಪ್ರತಿಭಟನೆಗೆ ಸ್ವತಃ ಸಿಎಂ ಸಿದ್ದರಾಮಯ್ಯರವರೇ ಇಳಿದಿದ್ದು ಅವರ ಜೊತೆ ಡಿಸಿಎಂ ಡಿಕೆಶಿ, ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಶಾಸಕ ಪುಟ್ಟರಂಗಶೆಟ್ಟಿ, ಮತ್ತಿತರರು ಕೈ ಜೋಡಿಸಿದ್ದಾರೆ. ಜೊತೆಗೆ ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೌನ ಪ್ರತಿಭಟನೆಗೆ ಇಳಿದಿದ್ದು ವಿಶೇಷವಾಗಿದೆ.
- Advertisement -