Veerappa Moily : ಬಿಜೆಪಿಯು ಸೇಡಿನ ರಾಜಕೀಯ ಮಾಡುತ್ತಿದೆ : ಎಂ.ವೀರಪ್ಪ ಮೊಯ್ಲಿ

ಕಾರ್ಕಳ : ಬಿಜೆಪಿಯು ಸೇಡಿನ ರಾಜಕೀಯವನ್ನು ಮಾಡುತ್ತಿದೆ. ಬಿಜೆಪಿಗರು ನ್ಯಾಯಂಗ, ಶಾಸಕಾಂಗ, ಕಾರ್ಯಾಂಗವನ್ನು ದುರುಪಯೋಗ ಮಾಡುತ್ತಿದ್ದಾರೆ. ಇದು ಬಿಜೆಪಿಯ ಅವನತಿಯ ಕಾಲ ಸನ್ನಿಹಿತವಾದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದರು.

ಅವರು ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ತೇಜೋವಧೆ ಮತ್ತು ನಿರಂತರ ಕಿರುಕುಳವನ್ನು ವಿರೋಧಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ನಡೆದ ಮೌನ ಪ್ರತಿಭಟನೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಬುಧವಾರ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು ಕಾರ್ಕಳದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ.ಆರ್ ರಾಜು, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಅಧ್ಯಕ್ಷ ಚಂದ್ರಶೇಖರ್ ಬಾಯರಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ, ಕಾರ್ಕಳ ಕಾಂಗ್ರೆಸ್ ವಕ್ತಾರ ಶುಭದ್ ಕಾರ್ಯಕರ್ತರು ಉಪಸ್ಥಿತರಿದ್ದರು.

Mining-ಶಾಸಕ ಮುನಿರತ್ನ ವಿರುದ್ದ ತಹಶಿಲ್ದಾರರಿಂದ ದೂರು

Siddaramaiah :ಸದನದಲ್ಲೇ ಸಿಎಂ ಸಿದ್ದರಾಮಯ್ಯ ಸವಾಲು

Yathnal : ನೀವು ಯಾರ ಜೊತೆಗೋ ಅಡ್ಜಸ್ಟ್‌ಮೆಂಟ್ ಮಾಡಿಕೊಂಡಿದ್ದೀರಿ: ಯತ್ನಾಳ್

 

About The Author