Thursday, May 8, 2025

Latest Posts

Chandrayana-3 : ಇದು ಭಾರತಕ್ಕೆ ಹೆಮ್ಮೆಯ ಕ್ಷಣ : ಸಿಎಂ ಸಿದ್ದರಾಮಯ್ಯ

- Advertisement -

Banglore News:  ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಇನ್ನು ಈ ನೌಕೆ ಚಂದ್ರನಲ್ಲಿ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದ್ದು, ಆಗಸ್ಟ್ 23 ಅಥವಾ 24ರಂದು ಚಂದ್ರನಲ್ಲಿ ಇಳಿಯಲಿದೆ ಎಂದು ಮಾಹಿತಿ ನೀಡಲಾಗಿದೆ.

Leopard : ಆಹಾರ ಅರಸಿ ಬಂದ ಚಿರತೆ ಕೊಟ್ಟಿಗೆಯಲ್ಲಿ ಬಂಧಿ..?!

Shravana belagola-ಜೋಳದ ಮೂಟೆ ಹೊತ್ತು ಬೆಟ್ಟ ಹತ್ತಿದೆ ಸಾಹಸಿ..! ಎಷ್ಟು ಕೆಜಿ ಭಾರ ಗೊತ್ತಾ?

Pramod Muthalik – ಶ್ರಿರಾಮ ಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿಕೆ

- Advertisement -

Latest Posts

Don't Miss