ಕಾರ್ಕಳ : ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕಾರ್ಕಳ, ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಕಾರ್ಕಳ ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಬುಧವಾರ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರಾಮ್‍ದಾಸ್ ಪ್ರಭು ಮಾತಾನಾಡಿ ಜನಸಂಖ್ಯಾ ಹೆಚ್ಚಳದಿಂದಾಗುವ ಸಮಸ್ಯೆಗಳು ದೇಶದ ಪ್ರಗತಿಗೆ ಹಿನ್ನಡೆಯನ್ನುಂಟು ಮಾಡುತ್ತದೆ. ಹಾಗಾಗಿ ಜನಸಂಖ್ಯಾ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಜನಸಂಖ್ಯೆಯ ಮೌಲ್ಯವನ್ನು ಬಲಪಡಿಸಲು ಕುಟುಂಬ ಕಲ್ಯಾಣಾ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳುವುದು ಸಮುದಾಯದ ಅಗತ್ಯತೆಯಾಗಿರುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮ್ ರಾವ್ ಜನಸಂಖ್ಯಾ ಹೆಚ್ಚಳದ ದುಷ್ಪರಿಣಾಮಗಳು ಹಾಗೂ ಜನಸಂಖ್ಯೆ ಸ್ಥಿರತೆ ಕಾಪಾಡುವಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದ ಪಾತ್ರ ಮೊದಲಾದ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಸಾಧಕರಾದ ಡಾ. ದೀಕ್ಷಿತಾ, ಡಾ. ಬಿ. ಬಾಲಕೃಷ್ಣ ರಾವ್, ಡಾ. ಶಮಾ ಶುಕುರ್, ಶುಶ್ರೂಷಣಾಧಿಕಾರಿ ನಯನ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಪುಷ್ಪಲತಾ, ಶಮಿತಾ, ಅನುಪಮಾ,ರೇಷ್ಮಾ, ಆಶಾ ಕಾರ್ಯಕರ್ತೆಯರಾದ ಹೇಮಾ, ಶಾಂತಿ ಇವರನ್ನು ಸನ್ಮಾನಿಸಲಾಯಿತು. ಹಾಗೂ ಜನಸಂಖ್ಯಾ ದಿನಾಚರಣೆ 2023 ರ ಘೋಷ ವಾಕ್ಯವನ್ನೊಳಗೊಂಡ ಭಿತ್ತಿ ಪತ್ರ ಮತ್ತು ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.
Veerappa Moily : ಬಿಜೆಪಿಯು ಸೇಡಿನ ರಾಜಕೀಯ ಮಾಡುತ್ತಿದೆ : ಎಂ.ವೀರಪ್ಪ ಮೊಯ್ಲಿ
Free checkup-ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನಿಂದ ಪತ್ರಕರ್ತರಿಗೆ ಆರೋಗ್ಯ ತಪಾಸಣೆ