ಕರ್ನಾಟಕ ಟಿವಿ : ಹಾವೇರಿ :ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬರೀ ಸಾಲಮನ್ನಾ ಘೋಷಣೆ ಮಾಡಿಹೋದರೆ ಹೊರತು ಅದಕ್ಕಾಗಿ ಸೂಕ್ತ ರೂಪುರೇಷೆ ಸಿದ್ಧಪಡಿಸಲಿಲ್ಲ. ಬಾಯಿಗೆ ಬಂದಂತೆ ಘೋಷಣೆ ಮಾಡಿ ಹೋಗುವುದು ದೊಡ್ಡ ವಿಷಯವೇನಲ್ಲ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈಗ ರೈತರ ಸಾಲಮನ್ನಾ ಖೋತಾ ಆಗಿದೆ ಎಂದು ಕುಮಾರಸ್ವಾಮಿ ಅಪಪ್ರಚಾರ ಶುರುಮಾಡಿದ್ದಾರೆ.ಯಾವುದೇ ರೈತರಿಗೂ ಸರ್ಕಾರ ಅನ್ಯಾಯ ಮಾಡುವುದಿಲ್ಲ. ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.
ರೈತರ ಸಾಲ ಮನ್ನಾ ಹಂತಹಂತವಾಗಿ ದಾಖಲಾತಿ ಪರಿಶೀಲಿಸಲಾಗುತ್ತಿದೆ.. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ ವಿರೋಧ ಪಕ್ಷ ಸ್ಥಾನದಲ್ಲಿದ್ದಾರೆ. ಹೀಗಾಗಿ ವಿರೋಧ ಮಾಡುವುದು ಅವರ ಆಜನ್ಮ ಸಿದ್ಧ ಹಕ್ಕು ಎಂದು ತಿಳಿದುಕೊಂಡಿದ್ದಾರೆ. ಇರುವ ಇತಿಮಿತಿಯ ಅನುದಾನದಲ್ಲಿಯೇ ಯಡಿಯೂರಪ್ಪನವರು ಸಮತತೋಲನ ಬಜೆಟ್ ನೀಡಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ ನೀಡಲಾಗಿದೆ ಎಂದು ಸಚಿವರು ಹೇಳಿದರು.