Banglore News: ಬೆಂಗಳೂರು ಖಾಸಗಿ ಹೋಟೆಲ್ ಒಂದರಲ್ಲಿ ಮಹಾಘಟ್ ಬಂಧನ್ ಹೆಸರಿನಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಅಗಮಿಸಿದ್ದಾರೆ. ಇದೇ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್ ಠಾಕ್ರೆ ಆಗಮಿಸಿದರು.
ಕೇಂದ್ರದ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳು, ಶಿವಸೇನೆ ಮುಖ್ಯಸ್ಥರೂ ಆದ ಶ್ರೀ ಉದ್ಧವ್ ಠಾಕ್ರೆ ಅವರನ್ನು ಎಂ.ಬಿ ಪಾಟೀಲ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಮಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜೊತೆಗಿದ್ದರು.
DK Shivakumar : ರಾಷ್ಟ್ರದ ಕಡೆಗೆ ನಮ್ಮ ಬದ್ಧತೆಯನ್ನು ಪುನರುಚ್ಛರಿಸಬೇಕು: ಡಿಕೆಶಿ
Madhu Bangarappa : ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಮದುಬಂಗಾರಪ್ಪ
Rahul Gandhi : ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಕಾಂಗ್ರೆಸ್ ನಾಯಕರು