Tuesday, April 29, 2025

Latest Posts

HD Kumaraswamy : ಕಾಂಗ್ರೆಸ್ ನಿಂದ ಐಎಎಸ್ ಅಧಿಕಾರಿಗಳ ದುರ್ಬಳಕೆ – ಕುಮಾರಸ್ವಾಮಿ ಗಂಭೀರ ಆರೋಪ

- Advertisement -

Political News : ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ  ಬಿಜೆಪಿ  ಮಣಿಸಲೆಂದು ಶತಾಯಘತಾಯ ಶ್ರಮಿಸುತ್ತಿರುವ ಕಾಂಗ್ರೆಸ್ ಇಂದು ಅಂದರೆ ಜುಲೈ 18ರಂದು ಘಟಬಂಧ ಎನ್ನುವ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಸುತ್ತಿದ್ದು ಈ ಸಭೆಗೆ 23 ಪಕ್ಷದ  49ಕ್ಕೂ ಅಧಿಕ ನಾಯಕರು ಭಾಗಿಯಾಗುವ ನಿರೀಕ್ಷೆ ಇತ್ತು. ಇದೀಗ ಹೊರ ರಾಜ್ಯದಿಂದ ಬಂದಿರುವಂತಹ ನಾಯಕರಿಗೆ ಅದ್ದೂರಿ ಉಪಚಾರಕ್ಕೆ ಕಾಂಗ್ರೆಸ್ ಪಕ್ಷ ಐಎಎಸ್ ಅಧಿಕಾರಿಗಳನ್ನು ನೇಮಿಸಿರುವುದು  ಇದೀಗ ಖೇದಕರ ವಿಚಾರ ಎಂಬುವುದಾಗಿ ಸರಣಿ ಟ್ವಿಟ್ ಗಳ  ಮೂಲಕ  ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ.

ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.

ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ.

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ.

ಎಂ ಬುವುದಾಗಿ ನಿರಂತರ ಸರಣಿ ಟ್ವೀಟ್ ಮಾಡಿ ಕಾಂಗ್ರೆಸ್ ಈ  ನಡೆಯನ್ನು ಕಠೋರವಾಗಿ ಟೀಕಿಸುವುದರ ಜೊತೆ ವಿರೋಧಿಸಿದ್ದಾರೆ.

 

- Advertisement -

Latest Posts

Don't Miss