ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿರುವುದು ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತಗೊಂಡಿವೆ.
ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದ ಮಧ್ಯದಲ್ಲಿನ ನವನಗರ, ಅಮರಗೋಳ, ಕೆಎಂಎಫ್ ಸೇರಿದಂತೆ ಅವಳಿನಗರದ ಮಧ್ಯದಲ್ಲಿನ ಬಿ.ಆರ್.ಟಿ.ಎಸ್ ಕಾರಿಡಾರ್ ಸಂಪೂರ್ಣ ಜಲಾವೃತಗೊಂಡಿದ್ದು, ಜನರು ಬಿ.ಆರ್.ಟಿ.ಎಸ್ ಯೋಜನೆ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ. ಅವೈಜ್ಞಾನಿಕ ಕಾರಿಡಾರ್ ನಿರ್ಮಿಸಿದ್ದು, ನೀರು ಸಮರ್ಪಕವಾಗಿ ಹರಿದು ಹೋಗಲು ಆಗದೇ ಇರುವ ಕಾರಣ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಇನ್ನೂ ಹುಬ್ಬಳ್ಳಿ ಧಾರವಾಡ ಅವಳಿನಗರದ ಮಧ್ಯದಲ್ಲಿ ಪ್ರತಿವರ್ಷವೂ ಇಂತಹ ಘಟನೆಗಳು ಸರ್ವೇ ಸಾಮಾನ್ಯವಾಗಿದ್ದು, ಈ ಬಗ್ಗೆ ಬಿ.ಆರ್.ಟಿ.ಎಸ್ ಸೂಕ್ತ ಕ್ರಮಗಳನ್ನು ಜರುಗಿಸುವ ಕಾರ್ಯ ಮಾಡಬೇಕಿದೆ.
Hubli railway station: ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಜನತಾ ಖಾನಾ: ಎಸ್.ಡಬ್ಲ್ಯೂ. ಆರ್ ವಿನೂತನ ಕಾರ್ಯ