State News : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗರಿಕೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ನಾಯಕರಾದ ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಜು.21ರಂದು ಸಂಜೆ 4ಕ್ಕೆ ಇರುವಕ್ಕಿಯಲ್ಲಿ ನಡೆಯುವ 8ನೇ ಘಟಿಕೋತ್ಸವದಲ್ಲಿ ವಿವಿ ಕುಲಾಧಿಪತಿ ಥಾವರಚಂದ್ ಗೆಹಲೋತ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.
ಯಡಿಯೂರಪ್ಪ ಅವರು 2008ರಲ್ಲಿ ಮುಖ್ಯಮಂತ್ರಿಯಾದ ಸಮಯದಲ್ಲಿ ದೇಶದಲ್ಲೇ ಮೊದಲ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿ ಗಮನಸೆಳೆದಿದ್ದರು. ಈ ವೇಳೆ ರೈತರ ಅನುಕೂಲಕ್ಕಾಗಿ ರಾಜ್ಯದಲ್ಲಿ ಮೊದಲ ಬಾರಿ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ಯೋಜನೆ ಜಾರಿ ಮಾಡಿದ್ದರು. ಇದಲ್ಲದೆ, ಸಾವಯವ ಕೃಷಿ ಯೋಜನೆ, ಸುವರ್ಣ ಭೂಮಿ ಯೋಜನೆ ಜಾರಿಗೊಳಿಸಿದ್ದರು.
Police : ಪೊಲೀಸರಿಗೆ ಇಲ್ಲ ರಕ್ಷಣೆ…! ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ..?!
Bengalore university: ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ