Dharawad BJP protest: ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ

ಧಾರವಾಡ: ಅಧಿವೇಶನದಿಂದ ಹತ್ತು ಜನ ಬಿಜೆಪಿ ಶಾಸಕರನ್ನು ಅಮಾನತ್ತು ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಚರ್ಚೆಯನ್ನು ಮಾಡದೇ ಅನೇಕ ಬಿಲ್‌ಗಳನ್ನು ಪಾಸ್ ಮಾಡಿದ್ದಕ್ಕೆ ಬಿಜೆಪಿ ಶಾಸಕರು ಬಿಲ್ ಹರಿದು ಹಾಕಿದ್ದಾರೆ. ಈ ಬಿಲ್‌ಗಳ ಮೇಲೆ ಚರ್ಚೆ ನಡೆಸಿದ್ದರೆ ಕಾಂಗ್ರೆಸ್ ಬಂಡವಾಳ ಬಯಲಾಗುತ್ತಿತ್ತು ಎಂಬ ಕಾರಣಕ್ಕೆ ಚರ್ಚೆಗೆ ಅವಕಾಶ ಕೊಡದೇ ಹತ್ತು ಜನ ಶಾಸಕರನ್ನು ಅಮಾನತ್ತು ಮಾಡಿದ್ದಾರೆ.

ಕಾಂಗ್ರೆಸ್ ಈ ರೀತಿಯ ಸರ್ವಾಧಿಕಾರಿ ಆಡಳಿತ ನಡೆಸುತ್ತಿದೆ. ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆದಿದೆ. ಉಗ್ರರಿಗೆ ಆಶ್ರಯ ನೀಡಿ ಅವರ ಪೋಷಣೆ ಮಾಡುತ್ತಿದೆ. ಸ್ಪೀಕರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕೆಳಗಿಳಿಯಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.

Gruhalaxmi: ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ: ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ

Kolara BJP Protest: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು..!

Udupi: ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಶೂಟ್ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರು

 

About The Author