- Advertisement -
Banglore News: ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆಶಿವಕುಮಾರ್ ವಿದೇಶದಲ್ಲಿಯೇ ನಮ್ಮ ಸರ್ಕಾರದ ವಿರುದ್ಧ ಸಂಚು ನಡೆಸಲಾಗುತ್ತಿದೆ ಎಂದು ಹೇಳಿದರು.
ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್, ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಇದೆಲ್ಲವೂ ಒಂದು ತಂತ್ರ ಮತ್ತು ನಾನು ಅದರ ಬಗ್ಗೆ ತಿಳಿದುಕೊಂಡಿದ್ದೇನೆ. ಬೆಂಗಳೂರಿನಲ್ಲಿ ಯೋಜನೆಯನ್ನು ಹಾಕಿದರೆ ಸಂಚು ಬಯಲಿಗೆ ಬರುವ ಸಾಧ್ಯತೆ ಇರುವುದರಿಂದ ಸಿಂಗಾಪುರದಲ್ಲಿ ತಂತ್ರ ಮಾಡಲಾಗಿದೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.
- Advertisement -