ಬಿಬಿಎಂಪಿ: ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ಈ ವಿಚಾರವಾಗಿ ಎಲ್ಲಾ ವರ್ಗದ ಜನರ ಸಲಹೆ ಪಡೆಯುತ್ತಿದ್ದೇನೆ. ನಾವು ಭವಿಷ್ಯದ ಬೆಂಗಳೂರನ್ನು ಮುಂದಿನ ಪೀಳಿಗೆಗಾಗಿ ನಿರ್ಮಾಣ ಮಾಡಬೇಕು. ಇದಕ್ಕಾಗಿ, ಭವಿಷ್ಯದ ಬೆಂಗಳೂರನ್ನು ನಮ್ಮ ದೃಷ್ಟಿಕೋನಕ್ಕಿಂತ ಮಕ್ಕಳ ದೃಷ್ಟಿಕೋನದಲ್ಲಿ ನೋಡಬೇಕು. ಅದಕ್ಕಾಗಿ ಮಕ್ಕಳ ಸಲಹೆ ಪಡೆಯುತ್ತಿದ್ದೇನೆ. ಬೆಂಗಳೂರು ತನ್ನದೇ ಆದ ಇತಿಹಾಸ, ಪರಂಪರೆ ಹೊಂದಿದೆ.
ಇಂದು ಚರ್ಚಾ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಹಸಿರು ಬೆಂಗಳೂರಿನ ಕುರಿತು ಮಾತನಾಡಿದ್ದನ್ನು ಗಮನಿಸಿದೆ. ನಾನು ಸಚಿವನಾದ ನಂತರ ಪರಿಸರ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಆಗ ನಾನು, ಪಾಲಿಕೆಯು ಶಾಲಾ ಆಡಳಿತ ಜೊತೆ ಒಡಂಬಡಿಕೆ ಮಾಡಿಕೊಂಡು ನಗರದಲ್ಲಿ ಶಾಲಾ ಮಕ್ಕಳಿಂದ ಗಿಡ ನೆಡಿಸಿ ಅವುಗಳನ್ನು ಬೆಳೆಸುವ ಜವಾಬ್ದಾರಿ ಅವರಿಗೆ ನೀಡಬೇಕು. ಆ ಗಿಡ ಬೆಳೆಸುವ ಮಗುವಿಗೆ ಆ ಮರದ ಬಳಿ ಹೆಸರು ಹಾಕಿಕೊಳ್ಳುವ ಅವಕಾಶ ನೀಡಬೇಕು ಎಂದು ಅಧಿಕಾರಿಗಳೇ ಸೂಚನೆ ನೀಡಿದೆ. ಇಲ್ಲಿನ ಸಂಸ್ಕೃತಿ ಹಾಗೂ ವಾತಾವರಣ ನಮಗೆ ಹೊಂದಿಕೊಳ್ಳುವಂತಿದ್ದು, ನಾವು ಹಸಿರು ಬೆಂಗಳೂರನ್ನು ಕಾಪಾಡಿಕೊಳ್ಳಬೇಕು.
ಬೆಂಗಳೂರಿಗೆ ಹೊಸ ರೂಪ ನೀಡಲು 70 ಸಾವಿರಕ್ಕೂ ಹೆಚ್ಚಿನ ಸಲಹೆಗಳು ಬಂದಿವೆ. ಇವುಗಳ ಜತೆ ಯುವ ಪ್ರತಿಭೆಗಳ ಆಲೋಚನೆಗಳನ್ನು ಪಡೆಯಬೇಕಿದೆ. ಅವರು ಯಾವುದೇ ವೈಯಕ್ತಿಕ ಆಸಕ್ತಿ ಇಲ್ಲದೆ ಸಲಹೆ ನೀಡುತ್ತಾರೆ.
ನಾಯಕರನ್ನು ಸೃಷ್ಟಿಸುವವನು ನಿಜವಾದ ನಾಯಕನೇ ಹೊರತು, ಹಿಂಬಾಲಿಕರನ್ನು ಸೃಷ್ಟಿಸುವವನಲ್ಲ ಎಂಬ ಮಾತಿದೆ. ನೀವುಗಳು ಕೂಡ ನೀವು ಆಯ್ಕೆ ಮಾಡಿಕೊಳ್ಳುವ ಕ್ಷೇತ್ರಗಳಲ್ಲಿ ನಾಯಕರಾಗಿ ಬೆಳೆಯಬೇಕು ಎಂದು ಬಯಸುತ್ತೇನೆ. ನೀವು ಸಧೃಡವಾಗಿ ಬೆಳೆದು, ಸಮಾಜಕ್ಕೆ ಕೊಡುಗೆ ನೀಡಬೇಕು. ಸಮಾಜಕ್ಕೆ ನೀವು ಏನು ಮಾಡುತ್ತೀರಿ ಎಂಬುದು ಮುಖ್ಯ.
ಬೆಂಗಳೂರು ಪೂರ್ವ ನಿಯೋಜಿತ ನಗರವಲ್ಲ. ಇದಕ್ಕೆ ಹೊಸ ರೂಪ ನೀಡುವುದು ಸವಾಲಿನ ಕೆಲಸ. ಇದಕ್ಕಾಗಿ ನಾವು ನಿನ್ನೆ ಬೆಂಗಳೂರು ವಿನ್ಯಾಸಕ್ಕೆ ಅಂತಾರಾಷ್ಟ್ರೀಯ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ.
ಇಲ್ಲಿನ ವಾತಾವರಣ ಹಾಗೂ ಸಂಸ್ಕೃತಿಗೆ ಮನಸೋತು ಹೆಚ್ಚಿನ ಸಮಯದಲ್ಲಿ ಬೆಂಗಳೂರಿಗೆ ಬಂದು ಮರಳಿ ತಮ್ಮ ಊರಿಗೆ ಹೋಗುವುದಿಲ್ಲ. ಬೆಂಗಳೂರು ಜ್ಞಾನ, ಶಿಕ್ಷಣ, ಮೆಡಿಕಲ್, ಐಟಿ ರಾಜಧಾನಿ ಆಗಿದೆ. ಇಲ್ಲಿ ಓದಿ ಬೆಳೆದವರು ವಿಶ್ವದ ಪ್ರಮುಖ ಕಂಪನಿಗಳನ್ನು ಮುನ್ನಡೆಸುತ್ತಿದ್ದಾರೆ.
ಇಲ್ಲಿ ಓದಿದ ಪ್ರತಿಭಾವಂತರು ಹೊರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಕೆಲವರು ಮಾತ್ರ ಇಲ್ಲೇ ಉಳಿಯುತ್ತಿದ್ದಾರೆ. ಕೆಲವೊಮ್ಮೆ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳಿಗಿಂತ ಮಕ್ಕಳು ಅತ್ಯುತ್ತಮ ಸಲಹೆಗಳನ್ನು ನೀಡುತ್ತಾರೆ. ಹೀಗಾಗಿ ನಾನು ನಿಮ್ಮ ಸಲಹೆ ಪಡೆಯುತ್ತಿದ್ದೇನೆ.
House visit: ಹುಬ್ಬಳ್ಳಿಯಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಸಚಿವ ಸಂತೋಷ ಕಾರ್ ಬೇಟಿ
Santosh lad: ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಾಯಕರು ಮೇಲೆ ಕಣ್ಣ ಬಿದ್ದಿದೆ.
Rain: ವರುಣಾರ್ಭಟಕ್ಕೆ ತತ್ತರಿಸಿದ ಧಾರವಾಡ ರೈತರು..! ಬೆಳೆಗಳಿಗೆ ದಿಗ್ಭಂದನ