Siddaramaiah : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂಧಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

Haveri News: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ25 ರಂದು ಹಾವೇರಿ ಜಿಲ್ಲೆಗೆ ಭೇಟಿನೀಡಿದ ವೇಳೆ ಜಿಲ್ಲಾಸ್ಪತ್ರೆಗೆ ತೆರಳಿ, ಆಸ್ಪತ್ರೆಯ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Image

ಮಳೆ ಬಂದಾಗ ವಾರ್ಡ್‌ಗಳಲ್ಲಿ ನೀರಿನ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶಿಸಿದರು. ಬಳಿಕ ಜಿಲ್ಲಾಸ್ಪತ್ರೆಯ ಸರ್ಜನ್, ವೈದ್ಯಾಧಿಕಾರಿಗಳು, ಹೆಲ್ತ್ ಎಂಜಿನಿಯರ್ ಸೇರಿದಂತೆ ಎಲ್ಲರಿಗೂ ತರಾಟೆಗೆ ತೆಗೆದುಕೊಂಡರು.

Image

ಮಳೆಯಿಂದ ಸೋರುತ್ತಿರುವ ಗೋಡೆ, ಚಾವಣಿ ಕಂಡು ಅಸಮಾಧಾನ ವ್ಯಕ್ತಪಡಿಸಿದ ಅವರು, ರೋಗಿಗಳನ್ನು ಬೇರೆ ಕಡೆ ಸ್ಥಳಾಂತರ ಮಾಡದೆ, ಅವರ ವಾರ್ಡಿನ ಮೇಲ್ಭಾಗ ಹೇಗೆ ಕಟ್ಟಡ ಕಾಮಗಾರಿ ನಡೆಸಿದ್ದಿರಿ ಎಂದು ಸ್ಥಳದಲ್ಲೇ ಇದ್ದ ಜಿಲ್ಲಾ ಶಸ್ತ್ರಚಿಕಿತ್ಸಕ, ಎಂಜಿನಿಯರ್ ಅನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ನಾಲ್ಕು ದಿನಗಳಲ್ಲಿ ಮಳೆ ಸೋರಿಕೆ ತಡೆಗಟ್ಟಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ : ಶಾಲೆ, ಪಿಯು ಕಾಲೇಜುಗಳಿಗೆ  ಜುಲೈ 26ರ ಬುಧವಾರ ರಜೆ ಘೋಷಣೆ

ಡಿಕೆಶಿ ಭೇಟಿಯಾದ ನಟ ವಿಜಯರಾಘವೇಂದ್ರ ದಂಪತಿ

Monsoon : ರಾಜ್ಯದಲ್ಲಿ ಮತ್ತೆ 9 ದಿನ ಮಳೆ ಮುನ್ಸೂಚನೆ…!

About The Author