Udupi News : ಉಡುಪಿ ಕಾಲೇಜು ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮರಾ ವಿಚಾರವಾಗಿ ವಿಚಾರಣೆಗಾಗಿ ಖುಷ್ಬೂ ಉಡುಪಿಗೆ ಆಗಮಿಸಿದ್ದರು. ಉಡುಪಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಖುಷ್ಬೂ, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ. ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.
ಪೊಲೀಸರ ಹೇಳಿಕೆ ಹೊರತಾಗಿ ಸದ್ಯ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ. ಮಾಹಿತಿ ಸಂಗ್ರಹಕ್ಕೆ ನಮಗೆ ಇನ್ನು ಸ್ವಲ್ಪ ಸಮಯಬೇಕು. ಯಾವುದೇ ವದಂತಿಗಳಿಗೆ ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ. ನಾವೇ ಸರಿಯಾದ ಮಾಹಿತಿಯನ್ನು ನೀಡುತ್ತೇವೆ. ಸಂಬಂಧಪಟ್ಟ ಫೋನ್ ಗಳು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ. ಇದಕ್ಕೆ ಹೊರತಾಗಿ ಯಾವುದೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ ಎಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ. ಪೊಲೀಸರ ಜೊತೆಗೆ ನಾವು ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಪೊಲೀಸರ ಸಹಕಾರದೊಂದಿಗೆ ನಮ್ಮ ತನಿಖೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Pramod Muthalik : ಶಾಸಕ ತನ್ವೀರ್ ಸೇಠ್ ವಿರುದ್ಧ ಪ್ರಮೋದ್ ಮುತಾಲಿಕ್ ಗರಂ