ಬೆಂಗಳೂರು: ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈ ಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ, ಇಡಿ ಸಂಪುಟ ದೆಹಲಿಗೆ ಹೋಗಿ ಪಕ್ಷದ ಸಭೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲಿ ನಡೆದಿರಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ ಎಂದು ದೂರಿದರು.
ಕನ್ನಡದ ಅಸ್ಮಿತೆಗೆ ಧಕ್ಕೆ:
ಸಿದ್ದರಾಮಯ್ಯ ಕನ್ನಡದ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದರು. ಈಗ ಇಡೀ ಸಂಪುಟವನ್ನೇ ದೆಹಲಿಗೆ ಕರೆದುಕೊಂಡು ಹೊಗಿ ಕನ್ನಡದ ಅಸ್ಮಿತೆಗೆ ಧಕ್ಕೆ ತಂದಿದ್ದಾರೆ. ರಾಜ್ಯ ಸರ್ಕಾರದ ಆಡಳಿತವನ್ನು ಕಾಂಗ್ರೆಸ್ ಹೈ ಕಮಾಂಡ್ ನಿಯಂತ್ರಣ ಮಾಡುತ್ತಿದೆ. ಕರ್ನಾಟಕದ ಜನತೆಗೆ ಇವರು ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ದಲಿತ ವಿರೋಧಿ ನೀತಿ:
ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದು ಸರ್ಕಾರದ ದಲಿತ ವಿರೋಧಿ ನೀತಿ ತೊರಿಸುತ್ತದೆ. ಎಸ್ಸಿಪಿ ಟಿಎಸ್ ಪಿ ಯೋಜನೆಗೆ ಮೀಸಲಿಟ್ಟ 34 ಸಾವಿರ ಕೋಟಿ ರೂ. ಅನುದಾನದಲ್ಲಿ ಸುಮಾರು 13 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದಲಿತರ ಅಭಿವೃದ್ಧಿ ಹೊಡೆತ ಬೀಳಲಿದೆ. ಇದು ಕಾಂಗ್ರೆಸ್ ನ ದಲಿತ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದರು.
ಇನ್ನು ಮಾಜಿ ಸಚಿವ ಬಸವರಾಜ ರಾಯರೆಡ್ಡಿಯವರ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ರಾಯರೆಡ್ಡಿಯವರು ಅತ್ಯಂತ ಮೇಧಾವಿಗಳು ಅವರು ಯಾವಾಗ ಯಾರ ಬಗ್ಗೆ ಏನು ಮಾತನಾಡುತ್ತಾರೆ ಎನ್ನುವುದು ತಿಳಿಯುವುದಿಲ್ಲ ಎಂದು ಹೇಳಿದರು.
Pangolins Animal : ಪ್ಯಾಂಗೋಲಿನ್ ಮಾರಾಟಕ್ಕೆ ಯತ್ನ 8 ಮಂದಿ ಬಂಧನ..!
Tungabadra; ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ:
Jaipur; ಅಪ್ರಾಪ್ತ ಬಾಲಕಿಯ ಶವವೊಂದು ಇಟ್ಟಿಗೆ ಗೂಡಿನಲ್ಲಿ ಸುಟ್ಟು ಕರಕಲಾಗಿರುವ ಸ್ತಿತಿಯಲ್ಲಿ ಪತ್ತೆಯಾಗಿದೆ.