Political News : ಆರಗ ಜ್ಞಾನೇಂದ್ರ ಕಲ್ಯಾಣ ಕರ್ನಾಟಕದಲ್ಲಿ ನೆರಳಿಲ್ಲ ತಮ್ಮ ತಲೆ ಕೂದಲೇ ನೆರಳು ಎಂಬುವುದಾಗಿ ತುಚ್ಛವಾಗಿ ಮಾತನಾಡಿ ಖರ್ಗೆ ಅವರ ಬಗ್ಗೆ ಬಹಳಷ್ಟು ಕೀಳಾಗಿ ಮಾತನಾಡಿದ್ದಾರೆ ಎಂಬ ವಿಚಾರಕ್ಕೆ ಆರಗ ಜ್ಞಾನೇಂದ್ರ ಅವರಿಗೆ ಖರ್ಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆ ಮಾತು ಎಂದು ಟ್ವೀಟ್ ಮಾಡಿದ್ದಾರೆ. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ”ಶತ ಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ’. ‘ಮನುಸ್ಮೃತಿ ಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿ ದಲಿತರ ರಾಜಕೀಯ ಏಳಿಗೆ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ’. ‘ಕರ್ನಾಟಕ ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರುಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿ ಯ ಕಾಲವಲ್ಲ, ಬಾಬಾಸಾಹೇಬರ ಸಂವಿಧಾನದ ಕಾಲ’ ಎಂದು ಹೇಳಿದ್ದಾರೆ.
,@JnanendraAraga ಅವರೇ,
ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು.
ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ.
ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 2, 2023
DK Shivakumar : ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಚರ್ಚೆ..!
Mukhyamantri Chandru: ಅರಗ ಜ್ಞಾನೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ