Ramanagara News : ರಾಮನಗರ ಜಿಲ್ಲೆಯ ಹೊರವಲಯದಲ್ಲಿ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು 27 ವರ್ಷದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಇತ್ತೀಚೆಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ
ರಾಮನಗರ ಜಿಲ್ಲೆಯ ಹಾರೋಬೆಲೆ ಗ್ರಾಮದ ಸಚಿನ್ ಕುಮಾರ್ ಎಂಬಾತ ತನ್ನ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಸಂಗ್ರಹಿಸುತ್ತಿದ್ದರು. ಕಚ್ಚಾ ಬಾಂಬ್‌ಗಳನ್ನು ಕಾಡು ಹಂದಿಗಳನ್ನು ಬೇಟೆಯಾಡಲು ಬಳಸಲಾಗುತ್ತಿತ್ತು. ಆಗಸ್ಟ್ 3 ರಂದು ಬಾಂಬ್ ಸ್ಫೋಟಗೊಂಡಾಗ ಸಚಿನ್ ಅವರ ಮುಖ ಮತ್ತು ಕೈಗಳಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸ್ಫೋಟದ ನಂತರ ಸಚಿನ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಚಿನ್ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ 1959ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಚಿನ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಮಡೆಸಲಾಗಿದೆ.
Photo shop: ಉಡುಪಿ ಕಾಲೇಜಿನ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ
Fund discrimination: ಅನುದಾನ ಹಂಚಿಕೆಯಲ್ಲಿ ತಾರತಮ್ಯ.! ಕೋರ್ಟ್ ಮೆಟ್ಟಿಲೇರಲು ಸಿದ್ಧ..!
Anganavadi Warden: ಗ್ರಾಮಸ್ಥರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯ ದರ್ಪ