Hubballi News: ಹುಬ್ಬಳ್ಳಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ವತಿಯಿಂದ ನಗರದ ಮಿನಿ ವಿಧಾನಸೌಧದ ಬಳಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ನಗರದ ತಹಶಿಲ್ದಾರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ದುಡಿತದ ದಿನಗಳನ್ನು 200ಗೆ ಹೆಚ್ಚಿಸಬೇಕು. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಪಡಿಸಬೇಕು ಅಲ್ಲದೇ ಜಿಎಸ್ ಟಿ ವ್ಯಾಪ್ತಿಯಿಂದ ಮುಕ್ತವಾಗಿಸಬೇಕು. ದುಡಿತದ ಅವಧಿ ದಿನಕ್ಕೆ 12 ಗಂಟೆ ಆದೇಶ ವಾಪಾಸ್ಸಾತಿಗಾಗಿ ಹಾಗೂ ವಿದ್ಯುತ್ ಮಸೂದೆ 2020 ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ನಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆವರೆಗೂ ತೀವ್ರತರವಾದಂತಹ ರೈತ ಹಾಗೂ ಕಾರ್ಮಿಕರ ಜಂಟಿ ಹೋರಾಟಗಳು ನಡೆಯಲಿವೆ ಎಂದು ಎಚ್ಚರಿಕೆ ನೀಡಿದರು.
ಧರಣಿ ಸತ್ಯಾಗ್ರಹದಲ್ಲಿ ಎಐಟಿಯುಸಿ ಮುಖಂಡರಾದ ಮಹೇಶ ಪತ್ತಾರ, ದೇವಾನಂದ ಜಗಾಪೂರ, ಟಿಯುಸಿಸಿ ಅಶೋಕ ಬಾರ್ಕಿ, ಕಟ್ಟಡ ಕಾರ್ಮಿಕರ ಸಂಘದ ಎ.ಎಸ್.ಪೀರಜಾದೆ, ಬೀಡಿ ಕಾರ್ಮಿಕರ ಸಂಘದ ಬಸೀರ್ ಮುಧೋಳ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ
ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಮಾರ-ಕಮೀಷನರೇಟಿನಲ್ಲಿ ಇತಿಹಾಸ ಸೃಷ್ಟಿ