Friday, December 13, 2024

Latest Posts

‘ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ’

- Advertisement -

Political News: ಈ ಹಿಂದೆ ಚುನಾವಣೆ ನಡೆಯುವುದಕ್ಕೂ ಮುನ್ನ, ತಾವು ಅಧಿಕಾರಕ್ಕೆ ಬಂದರೆ, ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆ ಎಳೆಯುವುದಾಗಿ, ಕಾಂಗ್ರೆಸ್ ಹೇಳಿತ್ತು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀೀಟ್ ಮಾಡಿದ್ದಾರೆ.

ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ ಎಂದು ಟ್ವೀೀಟ್ ಮೂಲಕ ಸಿಎಂ ಹೇಳಿದ್ದಾರೆ.

ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ. ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯ 14 ಗ್ರಾಮಗಳಿಗೆ ಕೆರೆ ಬತ್ತಿಹೋಗುವ ಆತಂಕ..

ಕೊಂಬಿನಿಂದ ತಿವಿದು ಬಾಲಕಿಯನ್ನು ಬಿಸಾಕಿದ ಹಸು- ವೀಡಿಯೋ ವೈರಲ್

Instagramನಲ್ಲಿ ಹವಾ ಮೆಂಟೇನ್ ಮಾಡಿದ ಕೊಹ್ಲಿ: ಒಂದು ಪೋಸ್ಟ್‌ಗೆ ಕೋಟಿ ಕೋಟಿ ಹಣ..

- Advertisement -

Latest Posts

Don't Miss