ಬೆಂಗಳೂರು: ನಾವು ಚುನಾವಣೆ ಸಮಯದಲ್ಲಿ ಅನೇಕ ಹೋರಾಟ ಮಾಡಿದೆವು. ಪ್ರಜಾಧ್ವನಿ ಯಾತ್ರೆ ಆರಂಭಿಸಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ಈ ಯೋಜನೆಗಳು ನಿಮಗೆ ಅತ್ಯಂತ ದೊಡ್ಡ ಶಕ್ತಿ ನೀಡಿದೆ. ನಿಮಗೆ ಸಿಕ್ಕಿರುವ ಈ ಶಕ್ತಿ ಬಗ್ಗೆ ಅರಿವಿದೆಯೋ ಇಲ್ಲವೋ, ಆದರೆ ವಿರೋಧ ಪಕ್ಷದವರಿಗೆ ಅರಿವಾಗಿದೆ. ಬೇರೆ ರಾಜ್ಯದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ ಸ್ಟಾಲಿನ್ ಅವರು ಕೂಡ ನಮ್ಮ ಯೋಜನೆಗಳನ್ನು ಶ್ಲಾಘಿಸಿದ್ದಾರೆ.
ಈ ಗ್ಯಾರಂಟಿ ಯೋಜನೆಗಳಿಗೆ 50 ಸಾವಿರ ಕೋಟಿ ಮೀಸಲಿಡಲಾಗಿದೆ. ದೇಶದಲ್ಲಿ ಯಾವುದೇ ಪಕ್ಷಗಳು ಯಾವುದೇ ರಾಜ್ಯದಲ್ಲಿ ಇಂತಹ ಯೋಜನೆ ಜಾರಿ ಮಾಡಲು ಸಾಧ್ಯವಾಗಿಲ್ಲ.ಗೃಹಲಕ್ಷ್ಮಿ ಯೋಜನೆ ಜಾರಿ ವಿಚಾರದಲ್ಲಿ ಪ್ರಜಾಪ್ರತಿನಿಧಿಗೆ ಅವಕಾಶ ಮಾಡಿಕೊಟ್ಟಿದ್ದೆವು. ಕೇವಲ 20% ಮಂದಿ ಮಾತ್ರ ಇದನ್ನು ಬಳಸಿಕೊಂಡಿದ್ದಾರೆ. 80%ರಷ್ಟು ಮಂದಿ ಈ ಅವಕಾಶ ಕೈಚೆಲ್ಲಿದ್ದೀರಿ. ನೀವು ನಿಮ್ಮ ಬ್ಲಾಕ್ ಮಟ್ಟದಲ್ಲಿ ಜನರಿಗೆ ಯೋಜನೆ ತಲುಪಿದೆಯಾ ಇಲ್ಲವೇ ಎಂದು ಪರಿಶೀಲಿಸಿ ಜನರ ಸಂಪರ್ಕ ಹೊಂದಬೇಕಿದೆ. ನೀವು ಅಧಿಕಾರ ಕೇಳುವ ಮುನ್ನ ಈ ಜವಾಬ್ದಾರಿ ನಿಭಾಯಿಸಬೇಕು.
ಈ ತಿಂಗಳಾತ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಕಾರ್ಯಕ್ರಮ ಮಾಡಲಿದ್ದು, ಪ್ರತಿಜ್ಞಾ ದಿನ ಕಾರ್ಯಕ್ರಮ ಮಾದರಿಯಲ್ಲಿ ಪಂಚಾಯ್ತಿ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಸರ್ಕಾರ ಈ ಕಾರ್ಯಕ್ರಮ ಮಾಡಲಿದ್ದು, ಶಾಸಕರು ಅಧ್ಯಕ್ಷತೆ ವಹಿಸಲಿದ್ದಾರೆ. ನೀವು ಈ ಕಾರ್ಯಕ್ರಮದಲ್ಲಿ ಜನರಿಗೆ ಅರಿವು ಮೂಡಿಸಿ ಸಂಘಟನೆ ಮಾಡಬೇಕು.
ಹುಬ್ಬಳ್ಳಿ ಸೈಬರ್ ಕ್ರೈಮ್ ಪ್ರಕರಣ: ಮೂವರು ವಿದ್ಯಾರ್ಥಿಗಳು ಅರೆಸ್ಟ್..
Rules : ಮಣಿಪಾಲದಲ್ಲಿ ವಾರಾಂತ್ಯ ಪಬ್, ಕ್ಲಬ್ ಗಳಿಗೆ ಕಟ್ಟುನಿಟ್ಟಿನ ಕ್ರಮ ಜಾರಿ
Himachala Pradesh: ರಣ ಮಳೆ ಮತ್ತು ಭೂ ಕುಸಿತಕ್ಕೆ ಹಲವಾರು ಜನರ ದುರ್ಮರಣ