Monday, December 23, 2024

Latest Posts

Brand bengalore : ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆ

- Advertisement -

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ.

ನಗರ ಪ್ರದೇಶದ ಬಡವರು, ವಲಸೆ ಕಾರ್ಮಿಕರು, ಶ್ರಮಿಕರ ಕ್ಷೇಮಾಭಿವೃದ್ಧಿಗೆ ಕೂಡ ನಮ್ಮ ಸರ್ಕಾರ ಕಾಳಜಿ ವಹಿಸಿದೆ. ಇದಕ್ಕಾಗಿ ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್‍ಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮನಗಂಡು ಸರ್ಕಾರವು ಪ್ರತಿ ಪ್ಲೇಟ್‍ಗೆ 5 ರಿಂದ 10 ರೂ. ಗಳಷ್ಟು ಹೆಚ್ಚುವರಿ ಮೊತ್ತ ನೀಡಿ, ಜನರಿಗೆ ಹಿಂದಿನ ದರದಲ್ಲಿಯೆ ಉತ್ತಮ ಆಹಾರವನ್ನು ಒದಗಿಸಲು ತೀರ್ಮಾನಿಸಿದೆ.

ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆಗೊಳಿಸಲು ನಗರದ ಹೊರವಲಯದಲ್ಲಿ ಜನರು ಪ್ರತಿದಿನ ಪ್ರಯಾಣಿಸಲು ಅನುಕೂಲವಾಗುವಂತೆ ರಸ್ತೆ, ರೈಲು ಸಂಪರ್ಕದೊಂದಿಗೆ ಉಪನಗರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿಗಳಲ್ಲಿ ಉಪನಗರ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು.

ನಗರ ಪ್ರದೇಶದ ಕೆರೆಗಳು ಮತ್ತಿತರ ಜಲಮೂಲಗಳ ಸಂರಕ್ಷಣೆ ಮಾಡುವುದರೊಂದಿಗೆ ಜನರಿಗೆ ಸ್ವಚ್ಛ ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಿದೆ.

Siddaramaiah: ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ.

Siddaramaiah: ಬ್ರಿಟಿಷರು ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆಗೆ ಹಸಿವನ್ನು ಬಳುವಳಿಯಾಗಿ ಬಿಟ್ಟು ಹೋಗಿದ್ದಾರೆ..!

DK Shivakumar: ನವರಂಗಿ ನಾರಾಯಣ, ಕಳ್ಳರ ರಕ್ಷಣೆಯಲ್ಲಿ ಡಾಕ್ಟರೇಟ್:

- Advertisement -

Latest Posts

Don't Miss