ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ಬಿಜೆಪಿ ಕೋರ್ ಕಮಿಟಿ ನಡೆಯಿತು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಡಾ|| ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ಪಾಲ್ಗೊಂಡರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿವಿಧ ಪಕ್ಷದ ಶಾಸಕರನ್ನು ಹಾಲಿ ಮತ್ತು ಮಾಜಿ ಶಾಸಕ ಮತ್ತು ಸಚಿವರನ್ನು ಕಾಂಗ್ರೆಸ್ ತನ್ನತ್ತ ಸೆಳೆಯುಲು ಯತ್ನಿಸುತ್ತಿರುವ ಘರ್ ವಾಪಸ್ ಸುದ್ದಿ ತಿಳಿದ ಬೆನ್ನಲ್ಲೆ ಇಂದು ಬಿಜೆಪಿ ನಾಯಕರು ಕೋರ್ ಕಮಿಟಿ ಸಭೆಯನ್ನು ನಡೆಸಿದರು.
Amith sha ಭಾನುವಾರ ಸಂಸದ ಸರ್ಕಾರದ ‘ರಿಪೋರ್ಟ್ ಕಾರ್ಡ್’ ಬಿಡುಗಡೆ ಮಾಡಲಿರುವ ಅಮಿತ್ ಶಾ
Atal Bihari Vajpayee : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿ : ಘನ್ಯರಿಂದ ಗೌರವ ನಮನ