Monday, December 23, 2024

Latest Posts

Birthday celebrate: ಡಾಲಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಪಾತ್ರ ಪರಿಚಯದ ಟೀಸರ್

- Advertisement -

ಸಿನಿಮಾ ಸುದ್ದಿ; ನಟ-ನಿರ್ಮಾಪಕ ಡಾಲಿ ಧನಂಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ “ಉತ್ತರಕಾಂಡ” ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.

ಹುಟ್ಟುಹಬ್ಬದ ಪೂರ್ವಭಾವಿಯಾಗಿ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದವರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡಿದ್ದರು. ಧನಂಜಯ್ ಅವರ ಪಾತ್ರವಾದ “ಗಬ್ರು ಸತ್ಯ”ನ ಪರಿಚಯಿಸುವ ಟೀಸರ್ ಬಿಡುಗಡೆ ಮಾಡಲಾಯಿತು. ಈ ಟೀಸರ್ ಈಗಾಗಲೇ ಹಿಟ್ ಆಗಿದ್ದು, ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲವನ್ನು ಹುಟ್ಟುಹಾಕಿದೆ.

“ಉತ್ತರಕಾಂಡ” ಚಿತ್ರವು ಉತ್ತರ ಕರ್ನಾಟಕದ ಪ್ರದೇಶದಲ್ಲಿ ನಡೆಯುವ ಕಥೆಯಾಗಿದ್ದು, ಗಬ್ರು ಸತ್ಯ ಎಂಬ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮತ್ತು ದಿಗಂತ್ ಸಹ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಕೆ ಆರ್ ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ಈ ಚಿತ್ರವನ್ನು ರೋಹಿತ್ ಪದಕಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಮತ್ತು ಚರಣ್ ರಾಜ್ ಅವರ ಸಂಗೀತ ಈ ಚಿತ್ರಕ್ಕಿದೆ.

“ಉತ್ತರಕಾಂಡ” , ಕೆ ಅರ್ ಜಿ ಸ್ಟುಡಿಯೋಸ್ ಮತ್ತು ಧನಂಜಯ್ ಅವರ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಮೂರನೇ ಚಿತ್ರವಾಗಿದ್ದು, ಕನ್ನಡ ಚಿತ್ರರಂಗದ ಅತೀ ನಿರೀಕ್ಷಿತ ಚಿತ್ರವಾಗಿದೆ.

Film story: ಒಂದು ಶಿಕಾರಿಯ ಕಥೆ ಚಿತ್ರದ ನಿರ್ದೇಶಕರ ಹೊಸ ಸಿನಿಮಾ ‘ವಸಂತಕಾಲದ ಹೂಗಳು’

Film story: ಒಂದು ಶಿಕಾರಿಯ ಕಥೆ ಚಿತ್ರದ ನಿರ್ದೇಶಕರ ಹೊಸ ಸಿನಿಮಾ ‘ವಸಂತಕಾಲದ ಹೂಗಳು’

Yathabava; ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್ .

- Advertisement -

Latest Posts

Don't Miss