ಮೈಸೂರು: ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ‘ಗೃಹ ಲಕ್ಷ್ಮಿ’ ಯೋಜನೆಯ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಗುರುವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ತನ್ವೀರ್ ಸೇಠ್, ನರೇಂದ್ರ ಸ್ವಾಮಿ,ಅನಿಲ್ ಚಿಕ್ಕ ಮಾದು, ಡಿ.ರವಿ ಶಂಕರ್, ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
BVB College: ಸೀಟ್ ನೀಡಬೇಕೆಂದು ಅಗ್ರಹಿಸಿ ಭಗತ್ ಸಿಂಗ್ ಸೇವಾ ಸಮಿತಿಯಿಂದ ಪ್ರತಿಭಟನೆ..!
Laxmi hebbalkar: ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಟೊಂಕಕಟ್ಟಿ ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Laxmi hebbalkar: ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಟೊಂಕಕಟ್ಟಿ ನಿಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

