Friday, November 22, 2024

Latest Posts

Lokasabha election: ಲೋಕಸಭಾ ಚುನಾವಣೆ; ಜೋಶಿ ವಿರುದ್ಧ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ….?

- Advertisement -

ಹುಬ್ಬಳ್ಳಿ: ರಾಜ್ಯ ರಾಜಕೀಯ ವಲಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ.ಧಾರವಾಡ ಜಿಲ್ಲೆಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಕೈ ಕಮಲಗಳ ನಡುವಿನ ಜಟಾಪಟಿ ಜೋರಾಗಿದೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಹೌದು….ಈ ಕ್ಷೇತ್ರದಲ್ಲಿ 1996ರಿಂದ ಬಿಜೆಪಿ ನಿರಂತರವಾಗಿ ಗೆಲ್ಲುತಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನಾಲ್ಕು ಅವಧಿಯಿಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.ಅವರ ಎದುರು ಅಭ್ಯರ್ಥಿಯಾಗಿ ಶಿವಲೀಲಾ ಅವರನ್ನು ಕಣಕ್ಕಿಳಿಸಲು ಪಕ್ಷದ ಮುಖಂಡರು ಚರ್ಚೆ ನಡೆಸಿದ್ದಾರೆ.ಹಿಂದಿನ ಎರಡು ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ವಿನಯ ಕುಲಕರ್ಣಿ ಅವರು ಸ್ಪರ್ಧಿಸಿ, ಸೋತಿದ್ದರು.8 ವಿಧಾನಸಭಾ ಕ್ಷೇತ್ರಗಳು ಒಳಗೊಂಡ ಈ ಲೋಕಸಭಾ ಕ್ಷೇತ್ರದ ತುಂಬಾ ಓಡಾಡಿ ವಿನಯ ಕುಲಕರ್ಣಿ ಜನಸಂಪರ್ಕ ಬೆಳೆಸಿಕೊಂಡಿದ್ದಾರೆ.

ಧಾರವಾಡ, ಹುಬ್ಬಳ್ಳಿ – ಧಾರವಾಡ ಪೂರ್ವ , ಹುಬ್ಬಳ್ಳಿ – ಧಾರವಾಡ ಪಶ್ಚಿಮ,
ಹುಬ್ಬಳ್ಳಿ – ಧಾರವಾಡ ಕೇಂದ್ರ, ನವಲಗುಂದ , ಕಲಘಟಗಿ, ಕುಂದಗೋಳ, ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ಸೇರಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ.ವಿನಯ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದಾರೆ. ಈ ನಿಟ್ಟಿನಲ್ಲಿ ಜೋಶಿ ವಿರುದ್ದ ಶಿವಲೀಲಾ ಕುಲಕರ್ಣಿ ಕಣಕ್ಕೆ ಇಳಿಸಲು ತೆರೆ ಮರೆಯ ಪ್ರಯತ್ನ ನಡೆದಿದೆ.

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಅವರ ಹತ್ಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯೊಳಗೆ ಪ್ರವೇಶಿಸಿದಂತೆ ವಿನಯ್ ಕುಲಕರ್ಣಿ ನ್ಯಾಯಾಲಯದಿಂದ ನಿರ್ಬಂಧಕ್ಕೆ ಒಳಗಾಗಿದ್ದಾರೆ. ಅದರಿಂದ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರಕ್ಕೆ ಬರಲು ಸಾಧ್ಯವಾಗಲಿಲ್ಲ. ಒಂದು ದಿನವೂ ಪ್ರಚಾರಕ್ಕೆ ಬರಲು ಆಗಲಿಲ್ಲ. ಆಗ ಅವರ ಪರವಾಗಿ ಪತ್ನಿ ಶಿವಲೀಲಾ ಪ್ರಚಾರ ಕೈಗೊಂಡರು. ಇಡೀ ಕ್ಷೇತ್ರದ ತುಂಬಾ ಸುತ್ತಾಡಿ, ಮತದಾರರನ್ನು ಭಾವನಾತ್ಮಕವಾಗಿ ಸೇಳೆದರು. 18 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ವಿನಯ್ ಕುಲಕರ್ಣಿ ಅವರನ್ನು ಗೆಲ್ಲಿಸಿದರು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಶಿವಲೀಲಾ ಕುಲಕರ್ಣಿ ಅವರಿಗೆ ಮಣೆ ಹಾಕುವಲ್ಲಿ ಚಿಂತನೆ ನಡೆಸಿದೆ.

Congress Gurentee : ತಾಯಿ ಮಕ್ಕಳ ಪೋಷಣೆ ಸರ್ಕಾರದ ಹೊಣೆ..!

Electricity Problem :ವಿದ್ಯುತ್ ಕಡಿತದಿಂದಾಗಿ ಕಂಗಾಲಾದ ಅನ್ನದಾತರು.

Police : ಡಾ.ಗೋಪಾಲ ಬ್ಯಾಕೋಡ ಧಾರವಾಡ ಜಿಲ್ಲೆಯ ನೂತನ ಎಸ್‌ಪಿ

- Advertisement -

Latest Posts

Don't Miss