ಬೆಂಗಳೂರು: ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ವೈಫಲ್ಯಗಳ ಕುರಿತು ಬಿಜೆಪಿ ಹೊರ ತಂದಿರುವ ಕೈಕೊಟ್ಟ ಯೋಜನೆಗಳು ಹಳಿ ತಪ್ಪಿದ ಆಡಳಿತ ಪುಸ್ತಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಅವರೊಂದಿಗೆ ಬಿಡುಗಡೆ ಮಾಡಿ ಮಾತನಾಡಿದರು. ಸಂಪೂರ್ಣ ಬಹುಮತ ಪಡೆದ ಸರ್ಕಾರ ಯಾವ ರೀತಿ ಆಡಳಿತ ಆರಂಭ ಮಾಡಿ ಯಾವ ರೀತಿ ದಿಕ್ಸೂಚಿ ನೀಡಬೆಕಾಗಿತ್ತು ಅದರ ಬದಲು ದಿಕ್ಕು ತಪ್ಪಿದ ಸರ್ಕಾರ ಇದಾಗಿದೆ.
ಸರ್ಕಾರ ಗೊಂದಲದಲ್ಲಿ ಸಿಲುಕಿ ಮಾತಿಗೆ ತಪ್ಪಿದ ಸರ್ಕಾರ ಇದಾಗಿದೆ. ಹಣಕಾಸಿನ ವ್ಯವಸ್ಥೆಯನ್ನು ಹಳಿ ತಪ್ಪಿಸಿದೆ. ನಾವು ಸರಪ್ಲಸ್ ಬಜೆಟ್ ಮಂಡನೆ ಮಾಡಿದ್ದೇವು ಇವರು ಬಂದ ಮೇಲೆ 8 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಸುಮಾರು 35 ಸಾವಿರ ಕೋಟಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ಒಟ್ಟು 45 ಸಾವಿರ ಕೋಟಿ ರೂ. ತೆರಿಗೆ ಮೂಲಕ ಸಂಗ್ರಹಿಸುವ ಅವಕಾಶ ಮಾಡಿಕೊಂಡು 12 ಸಾವಿರ ಕೋಟಿ ಡೆಫಿಸಿಟ್ ಹೆಚ್ಚಳ ಮಾಡಿಕೊಂಡಿದ್ದಾರೆ ನಾವು ಕೋವಿಡ್ ನಂತರ ಸರ್ ಪ್ಲಸ್ ಬಜೆಟ್ ಮಾಡಿದ್ದೇವು. ಇವರು ಕೊವಿಡ್ ಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಾರಿಗೆ ನೌಕರರ ಸಂಬಳ ವಿಳಂಬವಾಗುತ್ತಿದೆ. ಇವರು ಬಂದ ಮೇಲೆ ಒಂದು ಕಿಮಿ ರಸ್ತೆಯನ್ನೂ ಮಾಡಿಲ್ಲ ಎಂದು ಹೇಳಿದರು.
Indira canteen: ರಾಜ್ಯಾದ್ಯಂತ ಹೊಸದಾಗಿ 188ಇಂದಿರಾ ಕ್ಯಾಂಟಿನ್ಗಳು ಆರಂಭ..!
Siddaramaiah;ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ; ಸಿಎಂ ಸಿದ್ದರಾಮಯ್ಯ