ಬೆಂಗಳೂರು :ರಾಜ್ಯದಲ್ಲಿ ಬರಗಾಲ ಬಂದರೂ ರೈತರ ಕಡೆ ತಿರುಗಿ ನೋಡಿಲ್ಲ. ಎರಡು ಬಾರಿ ಬಿತ್ತನೆ ಮಾಡಿದ್ದರೂ ಬೆಳೆ ಬಾರದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ 50 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು.
ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 4500 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯಬೇಕಿದೆ. ಸಾಲ ವಸೂಲಿ ನಿಲ್ಲಿಸಬೇಕು. ಕೃಷಿ ಇಲಾಖೆಯಲ್ಲಿ ಟ್ರಾನ್ಸ್ ಫರ್ ಸುಗ್ಗಿ ನಡೆಯುತ್ತಿದೆ. ಎಲ್ಲ ಇಲಾಖೆಗಳಲ್ಲಿ ಟ್ರಾನ್ಸ್ ಫರ್ ಸುಗ್ಗಿ ನಡೆಯುತ್ತಿದೆ ಎಂದು ಆರೋಪಿಸಿದರು.
ನಮ್ಮ ಸರ್ಕಾರದ ರೈತ ವಿದ್ಯಾನಿಧಿ, ಭೂಸಿರಿ, ರೈತರಿಗೆ ವಿಮೆ ನೀಡುವ ಜೀವನ ಜ್ಯೋತಿ ಯೋಜನೆ, ರೈತ ಶಕ್ತಿ ಯೋಜನೆ ಸ್ಥಗಿತಗೊಳಿಸಿದ್ದಾರೆ. ರೈತರ ಆವರ್ತ ನಿಧಿ 100 ಕೋಟಿ ಮೀಸಲಿಟ್ಟಿದ್ದೇವು ಅದನ್ನು ನಿಲ್ಲಿಸಿದ್ದಾರೆ.
ಇವರು ದಲಿತರ ಬಗ್ಗೆ ಮಾತನಾಡುತ್ತಾರೆ. 100 ಅಂಬೇಡ್ಕರ್ ಹಾಸ್ಟೇಲ್ ಮಾಡಿದ್ದೇವು, ಕನಕದಾಸ ಹಾಸ್ಟೇಲ್ ಗಳು, ಐದು ಮೆಗಾ ಹಾಸ್ಟೇಲ್ ಗಳಿಗೆ ಅನುದಾನ ನೀಡಿಲ್ಲ. ನಮ್ಮ ಸರ್ಕಾರದ ಸ್ತ್ರೀಸಾಮಾರ್ಥ್ಯ ಯೋಜನೆ ಸ್ಥಗಿತಗೊಳಿಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಹಗಲು ದರೋಡೆ ರೀತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಮಂತ್ರಿಗಳ ನಡುವೆ ಭ್ರಷ್ಟಾಚಾದ ಜಗಳ ನಡೆಯುತ್ತಿದೆ. ಬೆಂಗಳೂರು ರೂರಲ್ ಎಸಿ, ಡಿಸಿ ಹುದ್ದೆಗಳಿಗೆ ಹರಾಜು ನಡೆಯುತ್ತಿದೆ. ಬೆಂಗಳೂರು ಎಸಿ ರೇಟ್ ಜಾಸ್ತಿಯಾಗಿದೆಯಂತೆ ಈಗ 13 ಕೋಟಿಗೆ ಏರಿದೆಯಂತೆ ಎಂದು ತಿಳಿಸಿದರು.
Siddu Dream: ಸ್ಟೆಥಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಮೆಡಿಕಲ್ ಸೀಟೇ ಸಿಗಲಿಲ್ಲ: