Congress Gurentee: ಗೃಹಲಕ್ಷ್ಮೀ ಯೋಜನೆಗೆ ಇಂದು ಅದ್ದೂರಿ ಚಾಲನೆ :ಸಿದ್ದು ಉತ್ಸುಕ

ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಗೆ ಇಂದು ಮೈಸೂರಿನಲ್ಲಿ ಅದ್ದೂರಿಯಾಗಿ ಜಾಲನೆ ದೊರೆಯಲಿದೆ. ಈ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟರ್ ನಲ್ಲಿ ಖುಷಿಯನ್ನು ಹಂಚಿಕೊಂಡಿದ್ದಾರೆ.

ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ “ಗೃಹಲಕ್ಷ್ಮಿ” ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ‌ ಮಾಡಲಿದ್ದಾರೆ.

ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ. ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ. ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ‌ ಸಮಾಜ ಸ್ಥಾಪನೆ.

Inaguration: ಗೃಹಲಕ್ಷ್ಮೀ ಯೋಜನೆ ಲೋಕಾರ್ಪಣೆ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ..!

Cultural activites: ಸಂತೋಷ್ ಲಾಡ್ ಫೌಂಡೇಶನ್‌ನಿಂದ ಸಾಂಸ್ಕೃತಿಕ ಸಂಭ್ರಮ

Police: “ಸುಳ್ಳ” ಗ್ರಾಮದಲ್ಲಿ ಅಂದರ್-ಬಾಹರ್” 2ಬೈಕ್ ಸಮೇತ ಐವರನ್ನು ವಶಕ್ಕೆ ಪಡೆದ ಪೊಲೀಸ್

About The Author