Tuesday, December 24, 2024

Latest Posts

Vijay Prakash:”ಜಲಪಾತ”ದಿಂದ ಹರಿದು ಬಂತು ಸುಂದರ ಪರಿಸರ ಗೀತೆ .

- Advertisement -

ಸಿನಿಮಾ ಸುದ್ದಿ: ಟಿ.ಸಿ.ರವೀಂದ್ರ ತುಂಬರಮನೆ ನಿರ್ಮಾಣದ, ರಮೇಶ್ ಬೇಗಾರ್ ನಿರ್ದೇಶನದ ” ಜಲಪಾತ” ಚಿತ್ರಕ್ಕಾಗಿ ರಮೇಶ್ ಬೇಗಾರ್ ಅವರೆ ಬರೆದಿರುವ “ಎದೆಯ ದನಿಯ ಹಾಡು ಕೇಳು” ಎಂಬ ಪರಿಸರದ ಕುರಿತಾದ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು.

ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಸಾದ್ವಿನಿ ಕೊಪ್ಪ ಸಂಗೀತ ನೀಡಿದ್ದಾರೆ. ಗಾಯಕಿಯಾಗಿ ಜನಪ್ರಿಯರಾಗಿರುವ ಸಾದ್ವಿನಿ, ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕಿಯಾಗಿದ್ದಾರೆ. ಖ್ಯಾತ ಗಾಯಕ ನಗರ ಶ್ರೀನಿವಾಸ ಉಡುಪ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು.

“ಜಲಪಾತ” ನನ್ನ ಎರಡನೇ ನಿರ್ದೇಶನದ ಚಿತ್ರ. ಪರಿಸರದ ಕುರಿತು ಜಗೃತಿ ಮೂಡಿಸುವ ಹಾಡುಗಳು ಸಾಕಷ್ಟು ಬಂದಿದೆ. ಆದರೆ ಈ ಹಾಡು ಸ್ವಲ್ಪ ವಿಭಿನ್ನ. ಮೊದಲ ನುಡಿಯಲ್ಲಿ ಪರಿಸರ ನಮಗೆ ಏನೆಲ್ಲಾ ನೀಡಿದೆ ಎಂದು ಇದೆ. ಎರಡನೇ ನುಡಿಯಲ್ಲಿ ನಮ್ಮಿಂದ ಪರಿಸರ ಏನಾಗುತ್ತಿದೆ ಎಂದಿದೆ. ವಿಜಯ್ ಪ್ರಕಾಶ್ ಅವರ ಕಂಠದಲ್ಲಿ ಈ ಹಾಡನ್ನು ಕೇಳುವುದೆ ಸೊಗಸು. ಅಷ್ಟೇ ಚೆನ್ನಾಗಿ ಸಾದ್ವಿನಿ ಸಂಗೀತ ನೀಡಿದ್ದಾರೆ‌. ರಜನೀಶ್,
ನಾಗಶ್ರೀ ಬೇಗಾರ್ ಈ ಚಿತ್ರದ ನಾಯಕ, ನಾಯಕಿ. ಪ್ರಮೋದ್ ಶೆಟ್ಟಿ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ .ಮಲೆನಾಡ ರಂಗಭೂಮಿ ಪ್ರತಿಭೆಗಳು ಹೆಚ್ಚಾಗಿ ಚಿತ್ರದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ದೇಶಕ ರಮೇಶ್ ಬೇಗಾರ್ ತಿಳಿಸಿದರು.

Sandalwood: “ಕಾಲಾಯ ನಮಃ” ಚಿತ್ರದಲ್ಲಿ ಸಹೋದರರ ಜುಗಲ್ ಬಂದಿ ..

Sudeep: “ಪೌಡರ್” ಸಿನಿಮಾಕ್ಕೆ ಕ್ಲಾಪ್ ಮಾಡಿದ ಕಿಚ್ಚ ಸುದೀಪ್

Upendra: ಹೊಸ ಚಿತ್ರಕ್ಕೆ ಶೀರ್ಷಿಕೆ ಅನಾವರಣ ಮಾಡಿದ ಉಪ್ಪಿ

 

- Advertisement -

Latest Posts

Don't Miss