ಧಾರವಾಡ: ಧಾರವಾಡದಲ್ಲಿ ಕಟ್ಟಡದ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕೆಂದು ಅಗ್ರಹಿಸಿ ಪ್ರತಿಭಟನೆ ಕೈಗೊಂಡರು.
ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ,ಕಟ್ಟಡ ಕಾರ್ಮಿಕರಿಗೆ ಜೀವನ ಯೋಗ್ಯ ಪಿಂಚಣಿ, ಆರೋಗ್ಯ ಸೌಲಭ್ಯ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಕೂಡಲೇ ಬಾಕಿ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಲು ಒತ್ತಾಯಿಸಿದರು.
ಕಟ್ಟಡ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲ. ಅಪಘಾತದಲ್ಲಿ ಮೃತಪಟ್ಟ ಕಾರ್ಮಿಕರಿಗೆ ಪರಿಹಾರ ಯೋಗ್ಯ ರೀತಿಯಲ್ಲಿ ಸಿಗುತ್ತಿಲ್ಲ.ಬೋಗಸ್ ಕಟ್ಟಡ ಕಾರ್ಮಿಕರನ್ನು ಪತ್ತೆ ಹಚ್ಚಿ ರದ್ದು ಮಾಡಬೇಕಾಗಿದೆ ಎಂದು ಕಾರ್ಮಿಕರು ಪಟ್ಟು ಹಿಡಿದರು.
ನೀಜವಾದ ಕಟ್ಟಡ ಕಾರ್ಮಿಕರಿಗೆ ತೋಂದರೆಯಾಗಿತ್ತಿದೆ. ಈ ಕೂಡಲೇ ಸರ್ಕಾರ ಕಟ್ಟಡ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದನೆ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟವನ್ನು ಮತ್ತಷ್ಟು ಉಗ್ರ ರೂಪ ಪಡೆದುಕೊಳ್ಳುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Raksha Bandhan: ಬಿಡುವು ಮಾಡಿಕೊಂಡು ರಾಕಿ ಕಟ್ಟಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!
Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್