ಬೆಂಗಳೂರು: ಬಿಬಿಎಂಪಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವುದಕ್ಕೆ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಸಂತಾಪ ಸೂಚಿಸಿದರು.
ಪಾಲಿಕೆಯ ಹಲವು ವಿಭಾಗಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಶಿವಕುಮಾರ್ ರವರು ಕಿರಿಯ ವಯಸ್ಸಿನಲ್ಲೇ ವಿಧಿವಶರಾಗಿರುವುದು ಮನಸ್ಸಿಗೆ ತುಂಬಾ ನೋವುಂಟು ಮಾಡಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ಕುಟುಂಬ ಸದಸ್ಯರು ಹಾಗೂ ಬಂಧು-ಮಿತ್ರರಿಗೆ ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಹುಟ್ಟೂರಿನಲ್ಲಿ ಅಂತ್ಯಕ್ರಿಯೆ:ಮುಖ್ಯ ಅಭಿಯಂತರರಾದ ಶಿವಕುಮಾರ್ ರವರ ಮೃತ ದೇಹವನ್ನು ಅಪೋಲೋ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ರಾಜರಾಜೇಶ್ವರಿ ನಗರದಲ್ಲಿರುವ ನಿವಾಸಕ್ಕೆ ಮೃತ ದೇಹವನ್ನು ಕೊಂಡೊಯ್ದು, ತದನಂತರದಲ್ಲಿ ಹುಟ್ಟೂರಾದ ನಂಜನಗೂಡಿನ ಚಂದ್ರವಾಡಿ ಗ್ರಾಮಕ್ಕೆ ಮೃತ ದೇಹವನ್ನು ಇಂದೇ ಕೊಂಡೊಯ್ದು, ನಾಳೆ ಅಂತ್ಯಕ್ರಿಯೆ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.
DKS-Tweet: ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತು ಖುಷಿ ವ್ಯಕ್ತಪಡಿಸಿದ ಡಿಸಿಎಂ..!
BBMP: ಅಗ್ನಿ ಅವಘಡದಲ್ಲಿ ಮುಖ್ಯ ಅಭಿಯಂತರರಾದ ಶಿವಕುಮಾರ್ ರವರು ವಿಧಿವಶ: