Monday, December 23, 2024

Latest Posts

First look: “ಜೋಗ್ 101” ಚಿತ್ರದಲ್ಲಿ ವಿಜಯ ರಾಘವೇಂದ್ರ .

- Advertisement -

ಸ್ಯಾಂಡಲ್ ವುಡ್: ನಟ ಚಿನ್ನಾರಿ ಮುತ್ತಾ ವಿಜಯ್ ರಾಘವೇಂದ್ರ ಅಭಿನಯದ ಜೋಗ್ 101 ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ  ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯ ಆಗಿದೆ.

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಿಜಯ ರಾಘವೇಂದ್ರ “ಜೋಗ್ 101” ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.

ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಘು(ರಾಘವೇಂದ್ರ ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯ್ ಕನ್ನಡಿಗ ಈ ಚಿತ್ರದ ನಿರ್ದೇಶಕರು.

ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ “ಜೋಗ್ 101” ಚಿತ್ರ ಈಗಾಗಲೇ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಮುಂದೆ ಟೀಸರ್, ಹಾಡುಗಳು ಹಾಗೂ ಟ್ರೇಲರ್ ಸಹ ಬರಲಿದೆ.

ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಡಾ||ವಿ.ನಾಗೇಂದ್ರಪ್ರಸಾದ್, ಜಯಂತ್ ಕಾಯ್ಕಿಣಿ ಹಾಗೂ ಮನ್ವರ್ಷಿ ನವಲಗುಂದ ಬರೆದಿದ್ದಾರೆ. ರಘು ದೀಕ್ಷಿತ್ ಮತ್ತು ಸಂಚಿತ್ ಹೆಗಡೆ ಹಾಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ “ಜೋಗ್ 101” ಚಿತ್ರದ ತಾರಾಬಳಗದಲ್ಲಿದ್ದಾರೆ.

Film news: ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ “ಗನ್ಸ್ ಅಂಡ್ ರೋಸಸ್”ಚಿತ್ರದ ನಾಯಕ

Vijay Prakash:”ಜಲಪಾತ”ದಿಂದ ಹರಿದು ಬಂತು ಸುಂದರ ಪರಿಸರ ಗೀತೆ .

Sandalwood: “ಕಾಲಾಯ ನಮಃ” ಚಿತ್ರದಲ್ಲಿ ಸಹೋದರರ ಜುಗಲ್ ಬಂದಿ ..

- Advertisement -

Latest Posts

Don't Miss