ಹುಬ್ಬಳ್ಳಿ: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಧಾರವಾಡ ಜಿಲ್ಲಾ ಬ್ರಾಹ್ಮಣ ಸೇವಾ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬ್ರಾಹ್ಮಣ ಸಮಾಜದ ಮುಖಂಡರು, ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶಪಡಿಸಿದರು.
ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ನಗರದ ತಹಶಿಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಉಪಾಧ್ಯಕ್ಷರಾದ ಹನುಮಂತ ಡಂಬಳ, ಎ.ಸಿ.ಗೋಪಾಲ್, ವಿಜಯ ನಾಡಜೋಶಿ, ವೀಣಾ ಹೆಗಡೆ, ವಸಂತ್ ಬಟ್, ಆರ್.ಡಿ.ಕುಲಕರ್ಣಿ, ದತ್ತಮೂರ್ತಿ ಕುಲಕರ್ಣಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
Medical camp: ಡಾ, ಕಿರಣ್ ಸೋಮಣ್ಣ ನೇತೃತ್ವದಲ್ಲಿ ಉಚಿತ ತಪಾಸಣೆ ಶಿಬಿರ;