Monday, December 23, 2024

Latest Posts

Shobha Karandlaje : ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ : ಸಚಿವೆ ಶೋಭಾ ಕರಂದ್ಲಾಜೆ

- Advertisement -

Manglore News : ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನದ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕುಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಬೇಕು. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು, ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ.ಚೈತ್ರ ಕುಂದಾಪುರದ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು. ಇನ್ನು ಈಪ್ರಕರಣದ ಬಗ್ಗೆ ಮಾಹಿತಿಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆಉನ್ನತ ಮಟ್ಟದ ತನಿಖೆಗೆ ನಾನು ಆಗ್ರಹಿಸುತ್ತೇನೆ..ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ.ನಾವು ಯಾರು ಅವಳನ್ನು ರಕ್ಷಣೆ ಮಾಡುತ್ತಿಲ್ಲ.

ಯಾರು ತಪ್ಪು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು.ಚೈತ್ರ ಕುಂದಾಪುರ ಜೊತೆಗೆ ನನಗೆ ಯಾವುದೇ ರೀತಿಯ ನೇರ ಸಂಪರ್ಕ ಇರಲಿಲ್ಲ.ಕಾನೂನು ಮೂಲಕ ಕ್ರಮ ಕೈಗೊಂಡು ತನಿಖೆ ಆಗಬೇಕು.ಉಪ್ಪು ತಿಂದವರು ನೀರು ಕುಡಿಯುತ್ತಾರೆ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ನನಗೆ ಚೈತ್ರ ಫೋನ್ ಮಾಡಿಲ್ಲ. ನಾನು ಕೂಡ ಅವಳನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ .

Guha Theertha : ಬಂಟ್ವಾಳ : ಸುಳ್ಳಮಲೆ ಗುಹಾತೀರ್ಥ ಸ್ನಾನಕ್ಕೆ ಸೆ.15ರಂದು ಮುಹೂರ್ತ

Kumbha Mela : ಅದ್ದೂರಿಯಾಗಿ ಜರುಗಿದ ನಾಯಕನಹಟ್ಟಿಯ ಶ್ರಾವಣ ಮಾಸದ ಕುಂಭ ಮೇಳ

Anushka Shetty : ಬೆಂಗಳೂರಿನ ಕಂಬಳಕ್ಕೆ ಅನುಷ್ಕಾ ಶೆಟ್ಟಿಗೆ ಆಹ್ವಾನ

- Advertisement -

Latest Posts

Don't Miss